
ಬೆಂಗಳೂರು,13ನವೆಂಬರ್ (ಹಿ.ಸ):
ಆ್ಯಂಕರ್ :ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ತಾತ್ಕಾಲಿಕವಾಗಿ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ ನೀಡಿದೆ. ಪದಗ್ರಹಣದ ಬಳಿಕ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನವನ್ನು ಸರ್ಕಾರ ಒದಗಿಸಲಿದೆ.
ರಾಜ್ಯಾಧ್ಯಕ್ಷರಾಗಿ ನೇಮಕವಾದ ಮೇಲೆ ಶಾಸಕ ಬಿವೈ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿವೈ ವಿಜಯೇಂದ್ರ ಅವರು ಮೊದಲಿಗೆ ಬೂತ ಮಟ್ಟದ ಅಧ್ಯಕ್ಷರನ್ನು ಭೇಟಿಯಾಗಿ ಸಿಹಿ ತಿನ್ನಿಸಿದರು. ಬಳಕಿ ರವಿವಾರ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಂತರ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ಹಿಂದೂಸ್ತಾನ್ ಸಮಾಚಾರ್
