ಬೆಂಗಳೂರು, 27 ಡಿಸೆಂಬರ್(ಹಿ.ಸ):
ಆ್ಯಂಕರ್ :
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆಯಲ್ಲಿ ಚರ್ಚೆಯಾಗಲಿದೆ. ಮೊದಲ ಹಂತವಾಗಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ನಡೆದರೆ, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವ ಸಭೆ ನಡೆಯಲಿದೆ.
ಇಂದಿನ ಪದಾಧಿಕಾರಿಗಳ ಸಭೆ ನಂತರ ವಿಜಯೇಂದ್ರ ಅವರು ನಾಳೆ (ಡಿಸೆಂಬರ್ 27) ರಾಜ್ಯ ಬಿಜೆಪಿಯ ಪ್ರಮುಖರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ. ಅವರ ಅಭಿಪ್ರಾಯ ಪಡೆದು ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ, ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಎದುರಿಸುವುದರ ಕುರಿತು ಎಲ್ಲರ ಸಲಹೆ ಪಡೆಯಲಿದ್ದಾರೆ. ಅಂತೆಯೇ ಈ ಸಭೆಯಲ್ಲಿ ರಾಜ್ಯದಲ್ಲಿ ತಳಮಟ್ಟಕ್ಕೆ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.
ಹಿಂದೂಸ್ತಾನ್ ಸಮಾಚಾರ್
