ಕಲಬುರಗಿ,25ನವೆಂಬರ್ (ಹಿ.ಸ):
ಆ್ಯಂಕರ್ :
ಕಲಬುರಗಿ ಜಿಲ್ಲೆ ಚಿತ್ತಾಪುರದ ತಳಗೇರಿ ಬಡಾವಣೆಯಲ್ಲಿ ಬೀದಿನಾಯಿಗಳ ದಾಳಿಯಿಂದ ಐವರಿಗೆ ಗಂಭೀರ ಗಾಯಗಳಾಗಿವೆ. ಬೀದಿನಾಯಿಗಳಿಂದ ಏಕಾಏಕಿ ಸಾರ್ವಜನಿಕರ ಮೇಲೆ ದಾಳಿ ನಡೆದಿದ್ದು ಮಹಿಳೆಯರು, ವೃದ್ಧರು, ಮಕ್ಕಳು ಸೇರಿದಂತೆ ಐವರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಕಲಬುರಗಿ ಜಿಲ್ಲೆ ಚಿತ್ತಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್
