ಬೆಂಗಳೂರು, 21 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯೆಯಲ್ಲಿ ಜನವರಿ 22ರಂದು ಪ್ರಭು ಶ್ರೀ ರಾಮನ ಪ್ರಾಣಪ್ರತಿಷ್ಠಾಪನೆಯಾಗ್ತೀದೆ . ಈ ದಿನದ ಸಂಭ್ರಮಕ್ಕೆ ದೇಶವೇ ಹಬ್ಬದಂತೆ ಸಿದ್ಧವಾಗಿದೆ. ಕೋಟ್ಯಾಂತರ ಹಿಂದೂಗಳು ಈ ದಿನವನ್ನು ಮತ್ತಷ್ಟು ವಿಶೇಷವಾಗಿಸಲು ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಅದರಂತೇ ಸಿಲಿಕಾನ್ ಸಿಟಿಯಲ್ಲಿಯೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನವರಿ 22ರಂದು ರಾಮಮೂರ್ತಿ ಪ್ರಾಣಪ್ರತಿಷ್ಠಾಪನೆ ಹಿನ್ನಲೆ ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆ, ಜಂಕ್ಷನ್ಗಳಲ್ಲಿ ರಾಮನ ಬೃಹತ್ ಕಟೌಟ್, ಪ್ಲೆಕ್ಸ್ ಹಾಕಲಾಗ್ತಿದ್ದು ಬೆಂಗಳೂರಿನಲ್ಲಿಯೂ ಸಂಭ್ರಮ ಶುರುವಾಗಿದೆ.
ಕೋಟ್ಯಾಂತರ ಭಾರತೀಯರ ಕನಸ್ಸು ಪ್ರಭು ಶ್ರೀರಾಮ ಮಂದಿರ ನಿರ್ಮಾಣ. ಇದಕ್ಕೆ ಈಗ ಕಾಲ ಕೂಡಿ ಬಂದಿದೆ. ಜನವರಿ 22 ಭಾರತದ ಇತಿಹಾಸದ ಪುಟಗಳಲ್ಲಿ ಅಚ್ಚಾಗುವ ದಿನ. ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣಪ್ರತಿಷ್ಠಯಾಗುವ ಶುಭ ಗಳಿಗೆ. ಅದರಲ್ಲೂ ಅಂದು ಬಾಲ ರಾಮನ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ದಿನದ ಸಂಭ್ರಮ ದೇಶಾದ್ಯಂತ ಹಿಂದೂಗಳಲ್ಲಿ ಈಗಾಗಲೇ ಮನೆ ಮಾಡಿದೆ. ಮನೆಮನೆಗೆ ಅಯೋಧ್ಯೆಯಿಂದ ಈಗಾಗಲೇ ಅಕ್ಷತೆ ಬಂದು ತಲುಪುತ್ತಿದೆ. ಇನ್ನು ಕೆಲವರು ಅಂದು ರಾಮ ಭಜನೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗುತ್ತಿದ್ದಾರೆ, ಮತ್ತೆ ಕೆಲವರು ಆ ದಿನ ರಾಜ ಜ್ಯೋತಿ ಬೆಳಗಿ ದೀಪಾವಳಿಯಾಗಿ ವಿಶೇಷವಾಗಿಸಬೇಕೆಂದುಕೊಂಡಿದ್ದಾರೆ. ಹಲವು ದೇವಸ್ಥಾನಗಳಲ್ಲಿ ಅನ್ನಪ್ರಸಾದಕ್ಕೆ ಪ್ಲಾನ್ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
