ಬೆಂಗಳೂರು, 23 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲು ಬೆಂಗಳೂರು ನಗರದಲ್ಲಿ ವಿಶ್ವ ರೈತ ದಿನವಾದ ಡಿಸೆಂಬರ್ 23ರಂದು ರಾಷ್ಟ್ರೀಯ ರೈತರ ಮಹಾ ಅಧಿವೇಶನ ಆಯೋಜನೆ ಮಾಡಲಾಗಿದೆ.
ಸಂಯುಕ್ತ ಕಿಸಾನ್ ಮೋರ್ಚಾದ ದಕ್ಷಿಣ ಭಾರತದ ಸಂಚಾಲಕ, ರೈತ ಹೋರಾಟಗಾರ ಕುರುಬೂರು ಶಾಂತಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ರೈತ ಮುಖಂಡರ ಸಮ್ಮುಖದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಗಂಭೀರ ಎಚ್ಚರಿಕೆ ನೀಡಲಾಗುತ್ತದೆ ಎಂದರು.ರೈತರು ಬರಗಾಲದ ಸಂಕಷ್ಟದಿಂದ ಬಳಲುತ್ತಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬರಲು ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. 2 ಸಾವಿರ ರೂ. ಬರ ಪರಿಹಾರದ ಭಿಕ್ಷೆ ಬೇಡ. ಸಂಪೂರ್ಣ ಬರ ನಷ್ಟ ಎಕರೆಗೆ 25 ಸಾವಿರ ರೂ. ಬಿಡುಗಡೆ ಮಾಡಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ರೈತರ ಮಹಾ ಅಧಿವೇಶನದ ಉದ್ದೇಶಗಳು
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ). ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ (ರಿ), ಕರ್ನಾಟಕ ಬೆಂಗಳೂರು ನಗರದಲ್ಲಿ ವಿಶ್ವ ರೈತ ದಿನದಂದು ನಡೆಯುವ ರೈತರ ಮಹಾ ಅಧಿವೇಶನದ ಉದ್ದೇಶಗಳೇನು? ಎಂದು ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.
* ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ ಹಾನಿ, ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದಾರೆ, ಬೆಳೆ ನಾಶವಾಗಿದೆ. ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟ ನೆರವು ಸಾಲ ಮನ್ನಾ 12 ಲಕ್ಷ ಕೋಟಿ ಮಾಡಿರುವ ರೀತಿ ರೈತರ ಸಾಲ ಮನ್ನ ಆಗಬೇಕು.
ಹಿಂದೂಸ್ತಾನ್ ಸಮಾಚಾರ್
