
ಬೆಂಗಳೂರು,8 ನವೆಂಬರ್ (ಹಿ.ಸ):
ಆ್ಯಂಕರ್ :
ಮೇಕೆದಾಟು ವಿಚಾರವನ್ನು ಸಿ ಡ್ಲೂ ಎಂ ಎ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ‘ಸುಪ್ರೀಂ’ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ನವದೆಹಲಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ‘ಸುಪ್ರೀಂ’ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್
