ಬೆಂಗಳೂರು, 22 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಆರಂಭವಾಗಿ, ನಗರದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ನಾಗರಿಕರಿಗೆ ಮಳೆ ಸಂಭ್ರಮ ಕಸಿದುಕೊಂಡಿದೆ.
ನಗರದಲ್ಲಿ ಬೆಳಗ್ಗಿನಿಂದಲೇ ಮಳೆ ಬಿಟ್ಟು ಬಿಡದೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದ್ದು,
ಕಳೆದ ರಾತ್ರಿಯಿಂದ ಸುರಿದ ಮಳೆಯಿಂದ ಹೂ ಹಣ್ಣು ವ್ಯಾಪಾರಿಗಳು ವ್ಯಾಪಾರವಿಲ್ಲದೆ ನಷ್ಟ ಅನುಭವಿಸುವಂತಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
