
ಬೆಂಗಳೂರು, 13ಡಿಸೆಂಬರ್(ಹಿ.ಸ):
ಆ್ಯಂಕರ್ :
ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿಗಾಗಿ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ಡಿಸೆಂಬರ್ 14 ರಿಂದ 18 ರವರೆಗೆ ನಾನ್-ಇಂಟರ್ಲಾಕಿಂಗ್ ಮತ್ತು ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ ಹಾಸನ ಯಾರ್ಡ್ ಪುನರ್ನಿರ್ಮಾಣಕ್ಕೆ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಡಿಸೆಂಬರ್ 11 ರಂದು ಪ್ರಿನ್ಸಿಪಲ್ ಚೀಫ್ ಆಪರೇಷನ್ ಮ್ಯಾನೇಜರ್ ಅವರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
