ಬೆಳಗಾವಿ, 4 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕುಂದಾನಗರಿ ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭ ಆಗಲಿದೆ . ಬೆಳಗಾವಿಯಲ್ಲಿ ನಡೆಯುವ 12ನೇ ಅಧಿವೇಶನಕ್ಕೆಎಲ್ಲಾ ರೀತಿಯ ಸಿದ್ದತೆಗಳನ್ನ ಈಗಾಗಲೇ ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣವಾಗಿ ಮಾಡಿಕೊಂಡಿದೆ. ಮಂತ್ರಿಗಳು, ಶಾಸಕರು, ಅಧಿಕಾರಿ ವರ್ಗ, ಪೊಲೀಸ್ ಸಿಬ್ಬಂದಿ ಹೀಗೆ ಪ್ರತಿಯೊಬ್ಬರಿಗೂ ವಾಸ್ತವ್ಯದ ವ್ಯವಸ್ಥೆ ಜೊತೆಗೆ ಊಟದ ವ್ಯವಸ್ಥೆ ಕೂಡ ಆಗಿದೆ. ಇತ್ತ ಈ ಬಾರಿಯೂ ಪ್ರತಿಭಟನೆಗಳ ಕಾವು ಸರ್ಕಾರ ತಟ್ಟಲ್ಲಿದ್ದು ಜೊತೆಗೆ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದ್ದು ಪೊಲೀಸರು ಖಡಕ್ ವಾರ್ನ್ ಕೊಟ್ಟಿದ್ದಾರೆ. ಸುವರ್ಣ ವಿಧಾನಸೌಧದ ಒಂದು ಕಿಮೀ ವ್ಯಾಪ್ತಿಯಲ್ಲಿ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
