ಬೆಂಗಳೂರು, 07 ಜುಲೈ (ಹಿ.ಸ.) :
ಆ್ಯಂಕರ್ : ಬೈಕ್ ಟ್ಯಾಕ್ಸಿ ನಿಷೇಧ,ಮೆಟ್ರೋ ದರ ಏರಿಕೆ,ಬಸ್ ದರ ಏರಿಕೆ, ಶಕ್ತಿ ಯೋಜನೆಯಿಂದ ಬಸ್ಸು ಸಿಗದೆ ಬೆಂಗಳೂರಿನ ಜನತೆ ಪರದಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸರಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವರು ಸರಕಾರದ ಎಡವಟ್ಟುಗಳಿಂದ ಪೆಟ್ರೋಲ್ ಬೆಲೆ ಜಾಸ್ತಿ ಆದರೂ ಸಾರ್ವಜನಿಕರು ತಮ್ಮ ದಿನಿತ್ಯದ ಕೆಲಸ ಕಾರ್ಯಗಳಿಗಾಗಿ ಖಾಸಗಿ ವಾಹನಗಳನ್ನು ಅವಲಂಬಿಸುವ ಅನಿವಾರ್ಯತೆ ಎದುರಾಗಿದ್ದು, ಇದರಿಂದ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಶೇ.15% ಹೆಚ್ಚಾಗಿದೆ ಎಂದಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಬೆಂಗಳೂರನ್ನ ಬರ್ಬಾದ್ ಮಾಡಿಬಿಟ್ಟರಲ್ಲ ಸ್ವಾಮಿ. ಇನ್ನು ಟನಲ್ ರಸ್ತೆ ಕಾಮಗಾರಿ ಶುರು ಆದರೆ ಪರಿಸ್ಥಿತಿ ಏನಾಗಬಹುದು ಎಂದು ಊಹಿಸಲೂ ಭಯ ಆಗುತ್ತಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
