• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ : ಡಾ. ಸುರೇಶ ಇಟ್ನಾಳ
Regional

ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ : ಡಾ. ಸುರೇಶ ಇಟ್ನಾಳ

CliQ INDIA
Last updated: December 7, 2025 5:50 am
CliQ INDIA
Share
3 Min Read
SHARE
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ - ಡಾ. ಸುರೇಶ ಇಟ್ನಾಳ
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ - ಡಾ. ಸುರೇಶ ಇಟ್ನಾಳ
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ - ಡಾ. ಸುರೇಶ ಇಟ್ನಾಳ
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ - ಡಾ. ಸುರೇಶ ಇಟ್ನಾಳ
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ - ಡಾ. ಸುರೇಶ ಇಟ್ನಾಳ
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ - ಡಾ. ಸುರೇಶ ಇಟ್ನಾಳ
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ - ಡಾ. ಸುರೇಶ ಇಟ್ನಾಳ

ಕೊಪ್ಪಳ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಕ್ಕಳಿಗೆ ಅವರ ಬಾಲ್ಯದ ಹಂತದಲ್ಲಿಯೇ ಬಹುಮುಖಿ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ತರಬೇತಿ ನೀಡುವುದರಿಂದ ಅವರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಕೊಪ್ಪಳ ನಗರದ ಹೊಸಪೇಟ ರಸ್ತೆಯ ಅಗ್ನಿಶಾಮಕ ಠಾಣೆಯ ಹತ್ತಿರದ ಕಲ್ವಾರಿ ಚಾಪೆಲ್ ಟ್ರಸ್ಟ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಹಾಗೂ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳ ಮಕ್ಕಳ ಜಾಗೃತಿ ಸಂಸ್ಥೆ, ಕಲ್ವಾರಿ ಚಾಪೆಲ್ ಟ್ರಸ್ಟ್, ಬೆಂಗಳೂರು, ಅಭಿನವ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಘ, ಕೊಪ್ಪಳ ಮತ್ತು ಸ್ಪೂರ್ತಿಧಾಮ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕುಣಿಕೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ನಮ್ಮ ಮಕ್ಕಳ ದಿನಾಚರಣೆ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ತಮ್ಮ ಬಾಲ್ಯದ ಜೀವನವನ್ನು ಕೇವಲ ಆಟೋಟಗಳಿಗೆ ಸೀಮಿತಗೊಳಿಸದೆ, ತಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆಟೋಟಗಳ ಜೊತೆಗೆ ವಿದ್ಯಾಭ್ಯಾಸ, ಸಂಗೀತ, ಕಲೆ, ಮಾತುಗಾರಿಕೆಯ ಜೊತೆಗೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಎಲ್ಲರೂ ಒಂದೇ ರೀತಿ ಇರಲು ಸಾಧ್ಯವಿಲ್ಲ. ಅವರವರ ಇಚ್ಛೆಯ ಮೇರೆಗೆ ಒಂದೊ0ದು ವೃತ್ತಿಯನ್ನು ಆರಿಸಿಕೊಳ್ಳಬಹುದು. ಪ್ರತಿಯೊಬ್ಬ ಮಗುವಿಗೂ ವಿಭಿನ್ನ ಆಸಕ್ತಿಗಳಿದ್ದು, ಅದನ್ನು ಗುರುತಿಸಬೇಕು. ಕೆಲವರಿಗೆ ಓದುವುದರಲ್ಲಿ ಆಸಕ್ತಿ ಕಡಿಮೆ ಇದ್ದರೂ, ಅವರಿಗೆ ಬೇರೆ ಕ್ಷೇತ್ರಗಳಲ್ಲಿ ಅಪಾರ ಆಸಕ್ತಿ ಇರುತ್ತದೆ. ಉದಾಹರಣೆಗೆ, ಆಟದಲ್ಲಿ, ಸಾಹಿತ್ಯದಲ್ಲಿ, ಚಿತ್ರಕಲೆಯಲ್ಲಿ. ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಹೆಚ್ಚಿದೆಯೊ ಅವರನ್ನು ಅದರಲ್ಲಿ ಹೆಚ್ಚಾಗಿ ತೊಡಗಿಸಿ ಅವರ ಭವಿಷ್ಯವನ್ನು ರೂಪಿಸಬೇಕು ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಮಕ್ಕಳ ದಿನಾಚರಣೆ ಪ್ರಯುಕ್ತ ಇಂದು `ನಮ್ಮ ಮಕ್ಕಳ ದಿನಾಚರಣೆ’ ಎನ್ನುವ ಅಂಶದೊಂದಿಗೆ ಕಾರ್ಯಕ್ರಮ ಮಾಡಲಾಗುತ್ತಿದೆ. ಮಕ್ಕಳ ಕೈಯಲ್ಲಿ ನಿರೂಪಣೆ ಮಾಡಿಸಿ ಅವರಿಗೆ ವೇದಿಕೆ ಭಯವನ್ನು ಹೋಗಲಾಡಿಸಲು ಒಂದು ಪ್ರಯತ್ನ ಮಾಡಿರುವುದು ತುಂಬಾ ಸಂತೋಷವಾಗಿದೆ. ಈ ಒಂದು ಕಾರ್ಯಕ್ರಮದ ಮೂಲಕ ಎಲ್ಲಾ ಮಕ್ಕಳಿಗೆ ಉತ್ತಮ ಭವಿಷ್ಯದ ಕಲ್ಪನೆ ಮೂಡಿಸುವಲ್ಲಿ ಒಂದು ಒಳ್ಳೆಯ ಪ್ರಯತ್ನವಾಗಿದೆ ಎಂದು ಹೇಳಿದರು.

ಸರ್ಕಾರದಿಂದ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಬೇರೆ ಬೇರೆ ರೀತಿಯ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಗಳ ಜಾರಿಗೆ ಎನ್.ಜಿ.ಓ ಸಂಸ್ಥೆಗಳು ಶ್ರಮಿಸುತ್ತಿವೆ. ಮಕ್ಕಳು ಸರ್ಕಾರದ ಯೋಜನೆಗಳನ್ನು ಉಪಯೋಗಿಸಿಕೊಂಡು ತಮ್ಮ ಮುಂದಿನ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕು. ಮಕ್ಕಳು ಓದುವುದರ ಜತೆಗೆ ಇತರೆ ಕಲಾತ್ಮಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಉತ್ತಮ ಮಾತುಗಾರಿಕೆಯನ್ನು ರೂಪಿಸಿಕೊಂಡು ಭವಿಷ್ಯದಲ್ಲಿ ಒಳ್ಳೆಯ ವಾಗ್ಮಿಗಳಾಗಿರಿ ಎಂದು ತಿಳಿಸಿದರು.

ಮಮತೆಯ ತೊಟ್ಟಿಲಿಗೆ ಚಾಲನೆ: ಕೊಪ್ಪಳ ನಗರದ ಹೊಸಪೇಟ ರಸ್ತೆಯ ಕಲ್ವಾರಿ ಚಾಪೆಲ್ ಟ್ರಸ್ಟ್ನ ಮುಂಭಾಗದಲ್ಲಿ ಸ್ಥಾಪಿಸಲಾದ ಮಮತೆಯ ತೊಟ್ಟಿಲಿಗೆ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಚಾಲನೆ ನೀಡಿ, ಮಕ್ಕಳ ಕಲಿಕಾ ಚಟುವಟಿಕೆಗಳ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೆ. ರಾಘವೇಂದ್ರ ಭಟ್, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳದ ವ್ಯವಸ್ಥಾಪಕರಾದ ಹರೀಶ್ ಜೋಗಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಬಿ. ಜಾಬಗೌಡರ ಸೇರಿದಂತೆ ಮತ್ತಿತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಮಹಿಳಾ ಮೀಸಲಾತಿ ಬಿಲ್ ಅಭಿನವ ಬಸವಣ್ಣನ ಕನಸು ಸಾಕಾರ : ಸಂಸದ ಗೋವಿಂದ ಕಾರಜೋಳ
ಪವಿತ್ರಾ ಗೌಡ ಜೊತೆ ಸ್ವಾಮಿ ಚಾಟ್ ಲಿಸ್ಟ್ ಲಭ್ಯ | BulletsIn
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ – Hindusthan Samachar Kannada
ಕಲಾ ಪ್ರತಿಭೋತ್ಸವ ಕಾರ್ಯಕ್ರಮ : ಅರ್ಜಿ ಆಹ್ವಾನ
ಸಂವಿಧಾನದ ಆಶೋತ್ತರಗಳಿಂದ ದೇಶದ ಅಭಿವೃದ್ದಿ ಸಾಧ್ಯ: ಬಿ.ನಾಗರಾಜ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಪ್ರಯಾಣಿಕರಿಗೆ ಹಣ ಮರುಪಾವತಿಸಲು ಇಂಡಿಗೋ ಸಂಸ್ಥೆಗೆ ಆದೇಶ
Next Article ಜನವರಿಯಲ್ಲಿ ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?