ಬೆಂಗಳೂರು, 27 ಜುಲೈ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳೀಕೇರಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಕರುಣಾಕರ ಖಾಸಲೆ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
