• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ : ಸಿದ್ದರಾಮಯ್ಯ ಆಗ್ರಹ
Regional

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ : ಸಿದ್ದರಾಮಯ್ಯ ಆಗ್ರಹ

CliQ INDIA
Last updated: January 4, 2026 11:20 am
CliQ INDIA
Share
4 Min Read
SHARE

ಸಿಂಧನೂರು, 03 ಜನವರಿ (ಹಿ.ಸ.) :

ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಅವರು ಇಂದು ಶ್ರೀ ಅಂಬಾಮಠ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಅಂಬಾ ಮಹೋತ್ಸವ -2026 ಜಾತ್ರಾ ಮಹೋತ್ಸವ ಹಾಗೂ ಸಿಂಧನೂರು ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು

ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ. ಇಂದು ಈ ಕ್ಷೇತ್ರದಲ್ಲಿ ಸಾಲಗುಂದಾ ಏತ ನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ

ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ನಿಗಮಗಳು 176 ಕೋಟಿಗಳನ್ನು ಒದಗಿಸಲಾಗಿದೆ. ಸಾಲಗುಂದಾ ಏತ ನೀರಾವರಿಗೆ 71 ಕೋಟಿ, ಮಳ್ಳೂರುಏತ ನೀರಾವರಿಗೆ 21 ಕೋಟಿ, ಒಳಬಳ್ಳಾರಿ ಏತ ನೀರಾವರಿಗೆ 43 ಕ್ಕೂ ಹೆಚ್ಚು ಅನುದಾನವನ್ನು ಒದಗಿಸಲಾಗಿದೆ. ಹಂಪನಗೌಡ ಬಾದರ್ಲಿ ಅವರು ಈ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ನೀರಾವರಿಗೆ 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರು ಒದಗಿಸುವ ಪ್ರಯತ್ನದಲ್ಲಿ 30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಉಳಿದ 12 ಲಕ್ಷ ಪ್ರದೇಶಕ್ಕೆ ನೀರು ಒದಗಿಸುವ ಕಾರ್ಯ ವಿವಿಧ ಹಂತಗಳಲ್ಲಿದೆ ಎಂದರು.

431 ಕೋಟಿಗಳನ್ನು ಪಾಪಯ್ಯ ಟನಲ್ ಮತ್ತು ಕಾಲುವೆ ಅಭಿವೃದ್ಧಿಗೆ ಹಾಗೂ ತುಂಗಭದ್ರಾ 33 ಗೇಟ್ ಗಳನ್ನು ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಜೂನ್ ಒಳಗೆ ಈ ಕೆಲಸವನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಬೆಳೆಗೆ ನೀರು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಎಷ್ಟೇ ವೆಚ್ಚವಾದರೂ ಹೊಸ ಗೇಟ್ ಗಳನ್ನು ಅಳವಡಿಸಿ ನೀರು ಒದಗಿಸುತ್ತೇವೆ ಎಂದರು.

ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು

ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ತಡೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು ಗ್ಯಾರಂಟಿಗಳಿಗೆ ಒಂದು ಲಕ್ಷದ 12 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 643 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಸುಮಾರು 16 ಸಾವಿರ ಕೋಟಿ ವೆಚ್ಚವಾಗಿದೆ ಎಂದರು. 52,000 ಕೋಟಿ ಗಳನ್ನು ಈ ವರ್ಷ ವೆಚ್ಚ ಮಾಡಲಾಗಿದೆ ಎಂದರು.

ಹಸಿರು ವಲಯ ಹೆಚ್ಚಳಕ್ಕೆ ಕ್ರಮ

ದೇಶದಲ್ಲಿಯೇ ಕರ್ನಾಟಕ ಅತಿ ಹೆಚ್ಚು ಒಣ ಭೂಮಿಯನ್ನು ಹೊಂದಿರುವ ಎರಡನೇ ರಾಜ್ಯ. ಆದ್ದರಿಂದ ರಾಜ್ಯದಲ್ಲಿ ಹೆಚ್ಚಿನ ನೀರಾವರಿ ಕೈಗೊಂಡು ಹಸಿರು ವಲಯ ಮಾಡುವುದು ನಮ್ಮ ಉದ್ದೇಶ ಎಂದರು. ಸಿಂಧನೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಲಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಇನ್ನೂ ಹೊರಡಿಸಿಲ್ಲ. 2003 ರಲ್ಲಿಯೇ ಇತ್ಯರ್ಥವಾಗಿ ನಮಗೆ ನ್ಯಾಯ ದೊರಕಿದ್ದರೂ 173 ಟಿಎಂಸಿ ನೀರನ್ನು ಬಳಕೆ ಮಾಡಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯವನ್ನು ಹೇರಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡಲು ನಾವು ಹಿಂದೆ ಬೀಳುವುದಿಲ್ಲ. ನುಡಿದಂತೆ ನಡೆಯುವ ಸರ್ಕಾರ ನಮ್ಮದು ಎಂದರು.

ಕಟ್ಟ ಕಡೆಯ ಭಾಗದ ರೈತರಿಗೆ ನೀರು ಒದಗಿಸಲಾಗುವುದು

ನೀರಾವರಿ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಕಟ್ಟಕಡೆಯ ಭಾಗದ ರೈತರಿಗೆ ನೀರು ಒದಗಿಸುವ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು.

ದೇವಸ್ಥಾನದ ಅಭಿವೃದ್ಧಿಗೆ ಮೊದಲನೇ ಹಂತದಲ್ಲಿ 6.30 ಕೋಟಿ ಅನುದಾನದ ಪೈಕಿ 2 ಕೋಟಿ ಈಗಾಗಲೇ ವೆಚ್ಚ ಮಾಡಲಾಗಿದೆ. ಉಳಿದ ಹಣವನ್ನೂ ಬಿಡುಗಡೆ ಮಾಡಲಾಗುವುದು ಎಂದರಲ್ಲದೆ ದೇವಸ್ಥಾನ ಮತ್ತು ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ವಿಬಿ ಜಿ ರಾಮ್ ಜಿ ರದ್ದುಗೊಳ್ಳಬೇಕು

6000 ಕೋಟಿಗಳನ್ನು ಪ್ರತಿ ವರ್ಷ ಖರ್ಚು ಮಾಡಲಾಗುತ್ತಿತ್ತು. ಆದರೆ ಕೇಂದ್ರದವರು ಈಗ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಯೋಜನೆಯನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದ್ದಾರೆ. ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರಿಗೆ ತೀವ್ರ ತೊಡಕುಂಟು ಮಾಡುವ ಈ ಹೊಸ ಕಾಯ್ದೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಎಂದರು.

ಜನಪರ ಯೋಜನೆಯ ಸ್ವರೂಪವೇ ಬದಲಾಗಿದೆ

ವಿಬಿ ಜಿ ರಾಮ್ ಜಿ ಕಾನೂನನ್ನು ರದ್ದು ಮಾಡಿ ,ಮ ನರೇಗಾ ಕಾನೂನು ಪುನರ್ ಸ್ಥಾಪನೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕಾನೂನಿನ ಸ್ವರೂಪವನ್ನೇ ಬದಲಾಯಿಸಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಆದರೆ ಈಗ ಕೇಂದ್ರವು ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 40 ರಷ್ಟು ಅನುದಾನ ಭರಿಸಬೇಕೆಂಬ ಹೊಸ ನಿಯಮ ತಂದಿರುವುದು ಸೂಕ್ತವಾಗಿರುವುದಿಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ ಜನಪರವಾಗಿದ್ದ ಮ ನರೇಗಾ ಕಾನೂನನ್ನು , 20 ವರ್ಷಗಳ ನಂತರ ಪ್ರಧಾನಿ ಮೋದಿಯವರು ಮಹಾತ್ಮಾ ಗಾಂಧಿಯವರ ಹೆಸರನ್ನೂ ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ನಾಳೆ ಸಂವಿಧಾನ ದಿನಾಚರಣೆ; ಜಾಗೃತಿ ಜಾಥಾ
ಜಿಂಕೆಗಳನ್ನು ಸಂಕಷ್ಠದಿ0ದ ಪಾರುಮಾಡಿದ ಶಿಕ್ಷಕ ಮುನಿರಾಜು
ರಾಯಚೂರು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪಂಜಿನ ಮೆರವಣಿಗೆ | BulletsIn
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ : ಮುಖ್ಯಮಂತ್ರಿ ಮೊದಲ ಪ್ರತಿಕ್ರಿಯೆ
ಅಂಜನಾದ್ರಿಯಲ್ಲಿ ಹನುಮ ಜಯಂತಿ ಸಂಭ್ರಮ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಗಿಗ್ ಕೆಲಸಗಾರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರಗಳ ಸ್ಪಷ್ಟ ಕ್ರಮ : ಜೈರಾಮ್ ರಮೇಶ್
Next Article ಪುಟ್ಬಾಲ್ ಪ್ರೀಮಿಯರ್ ಲೀಗ್ ; ಅಗ್ರ ಸ್ಥಾನದಲ್ಲಿ ಆರ್ಸೆನಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?