ಬೆಂಗಳೂರು, 3 ಜನವರಿ(ಹಿ.ಸ):
ಆ್ಯಂಕರ್ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರು ಇಂದು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ಹೊರತಂದಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನೂತನ ವರ್ಷ 2024ರ ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಿದರು.
ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ಼್ , ಗ್ರಾಮೀಣಾಭಿವೃದ್ಧಿ ಆಯುಕ್ತ ಪವನ್ ಕುಮಾರ್ ಮಾಲಪಾಟಿ. ಪಂಚಾಯತ್ ರಾಜ್ ಆಯುಕ್ತರಾದ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಮತ್ತು ಇನ್ನಿತರ ಅಧಿಕಾರಿ – ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
