ಚಿಕ್ಕಮಗಳೂರು, 7ನವೆಂಬರ್ (ಹಿ.ಸ):
ಆ್ಯಂಕರ್ : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
