
ಬೆಂಗಳೂರು , 11ನವೆಂಬರ್ (ಹಿ.ಸ):
ಆ್ಯಂಕರ್ :
ಮುಂದಿನ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು. ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದರು. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರದ ವೀಕ್ಷಕರು ಕೂಡ ಆಗಮಿಸುತ್ತಿದ್ದಾರೆ. ಅವರ ಸಮ್ಮುಖದಲ್ಲೇ ಪ್ರತಿ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆಯಾಗಲಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್
