ಹುಬ್ಬಳ್ಳಿ,, 6 ಜನವರಿ(ಹಿ.ಸ):
ಆ್ಯಂಕರ್ :
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.
ಹಿಂದೂಸ್ತಾನ್ ಸಮಾಚಾರ್
