ಬೆಂಗಳೂರು,18 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಇಲ್ಲಿನ ಕೆಂಗೇರಿ ಸಮೀಪದ ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದರು.
ಈ ಬಗ್ಗೆ ಮಾತನಾಡಿದ ಸಚಿವರು, ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. ಆದರೆ, ಬೆಂಗಳೂರಿನಲ್ಲಿ ನಮ್ಮ ಮನೆಗೆ ಹತ್ತಿರದಲ್ಲಿ ಇನ್ನೂ ಮೆಟ್ರೋ ಬಂದಿಲ್ಲ. ಹೀಗಾಗಿ, ನಮ್ಮ ರಾಜಧಾನಿಯಲ್ಲಿ ಈವರೆಗೆ ಮೆಟ್ರೋದಲ್ಲಿ ಸಂಚರಿಸುವ ಅವಕಾಶ ಸಿಕ್ಕಿರಲಿಲ್ಲ. ಇವತ್ತು ವಾರದ ದಿನವಾದ್ದರಿಂದ ಸಂಚಾರ ದಟ್ಟಣೆ ಇರುತ್ತದೆ ಎನ್ನುವುದು ಗೊತ್ತಿತ್ತು. ಹೀಗಾಗಿ, ಮೊದಲೇ ನಮ್ಮ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೆ. ಇದರಂತೆ ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಗರದ ಜೀವನಾಡಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್
