
ಬೆಂಗಳೂರು, 3 ಡಿಸೆಂಬರ್(ಹಿ.ಸ):
ಆ್ಯಂಕರ್ :
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮೈಚುಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ಮೂರು ರಾಜ್ಯಗಳಿಗೆ ಕಟ್ಟೆಚ್ಚರ ನೀಡಲಾಗಿದೆ. ಆಂಧ್ರ, ಒಡಿಶಾ, ತಮಿಳುನಾಡಲ್ಲಿ ಭಾರೀ ಮಳೆಯಾಗಲಿದ್ದು, ರಾಜ್ಯದಲ್ಲೂ ಹೈಅಲರ್ಟ್ ಘೋಷಿಸಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ. ಗಂಟೆಗೆ 100 ಕಿಮೀ ವೇಗದಲ್ಲಿ ಮೈಚುಂಗ ಚಂಡಮಾರುತ ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆ ಕರ್ನಾಟಕಕ್ಕೂ ತಟ್ಟಲಿರುವ ಸೈಕ್ಲೋನ್ ಎಫೆಕ್ಟ್. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್
