ಮೈಸೂರು,15 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ವಿಶ್ವ ವಿಖ್ಯಾತ ಕರ್ನಾಟಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಇಂದು ಸಿನಿಮಾ ಸಾಹಿತಿ ಹಾಗೂ ಚಲನಚಿತ್ರ ಸಂಗೀತ ನಿರ್ದೇಶಕ ಡಾ.ಹಂಸಲೇಖ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಎ.ನಾರಾಯಣ ಸ್ವಾಮಿ, ಭಗವಂತ್ ಖೂಬಾ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ವಿಜಯದಶಮಿ ಮೆರವಣಿಗೆ ೨೪ ರಂದು ಸಂಜೆ ೪.೪೦ ರಿಂದ ೫ ಗಂಟೆಯವರೆಗೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
