ಬಾಗಲಕೋಟೆ,, 25 ಡಿಸೆಂಬರ್(ಹಿ.ಸ):
ಆ್ಯಂಕರ್ :
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಹಾದಿ ಬೀದಿಯಲ್ಲಿ ಹೋಗೋರು ಮಾತನಾಡಿದರೆ ಉತ್ತರ ಕೊಡಲ್ಲ. ಏನು ಮಾತಾಡ್ತಿದ್ದೀನಿ ಅಂತಾ ಅವರಿಗೆ ಅರ್ಥ ಆಗುತ್ತೋ ಇಲ್ವೋ ಗೊತ್ತಿಲ್ಲ. ದೀಪ ಆರುವಾಗ ಗಾಳಿಗೆ ಜಾಸ್ತಿ ಉರಿಯುತ್ತೆ ಎಂದು ಬಿಜೆಪಿ ನೂತನ ಪದಾಧಿಕಾರಿಗಳ ಬಗ್ಗೆ ಯತ್ನಾಳ್ ಟೀಕೆ ಮಾಡಿರುವ ವಿಚಾರವಾಗಿ ಮಾತನಾಡಿದ ವಿಚಾರವಾಗಿ ಮಾಜಿ ಸಚಿವ ಮುರುಗೇಶ್ ನಿರಾಣಿ ಪರೋಕ್ಷವಾಗಿ ತಿರುಗೇಟು ನೀಡಿದರು.
ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದುಹೋಗುತ್ತೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಜನ ರೊಚ್ಚಿಗೆದ್ದಿದ್ದಾರೆ. ಈ ಸರ್ಕಾರ ಹಿಂದೂಗಳಿಗೆ ತಾರತಮ್ಯ ಮಾಡುತ್ತಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ಜನ ಎದುರು ನೋಡುತ್ತಿದ್ದಾರೆ. ಈ ಸರ್ಕಾರ ತಾನಾಗೆ ಬಿದ್ದು ಹೋಗುತ್ತೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದೆ. ಅದರ ಬಗ್ಗೆ ಮಾತನಾಡಿ ನಾವೇಕೆ ಪಾಪ ಕಟ್ಟಿಕೊಳ್ಳುವ ಕೆಲಸ ಮಾಡಬೇಕು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
