

ರಾಯಚೂರು, 7 ಜನವರಿ(ಹಿ.ಸ):
ಆ್ಯಂಕರ್ : ತೆಲಂಗಾಣ ರಾಜ್ಯದ ಭುವನಗಿರಿ ಜಿಲ್ಲೆಯ ಸೋಮೇಶ್ವರ ಸ್ವಾಮಿ ದೇವಸ್ಥಾನ ಕೋಲನಪಾಕ ಸಮಿತಿ ವತಿಯಿಂದ ಆಯೋಜಿಸಿದ್ದ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಶ್ರೀಗಳವರ 68 ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಜಗದ್ಗುರು ಶ್ರೀಗಳು ಸಚಿವ ಎನ್ಎಸ್ ಬೋಸರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡುವ ಮೂಲಕ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಕಿಲ್ಲೇರ ಮಠದ ಶಾಂತಮಲ್ಲ ಶಿವಾಚಾರ್ಯ ಮಹಾ ಸ್ವಾಮಿಗಳು , ಸೋಮವಾರ ಪೇಟೆ ಮಠದ ಶ್ರೀಗಳಾದ ಅಭಿನವ ಶ್ರೀ ಸೋಮನಾಥ ಶಿವಾಚಾರ್ಯ , ಮಂಗಳವಾರ ಪೇಟೆ ಮಠ ಶ್ರೀ ಗಳು, ಸೇರಿ ಅನೇಕ ಮಠಾಧೀಶ್ವರರು ಇದ್ದರು.
