
ಬೆಂಗಳೂರು, 28 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕರ್ನಾಟಕದಲ್ಲಿ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ ೧೦೩ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೪೭೯ಕ್ಕೆ ಏರಿಕೆಯಾಗಿದೆ.
ಕಳೆದ ೨೪ ಗಂಟೆಗಳಲ್ಲಿ ೧೦೩ ಹೊಸ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ೪೭೯ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ರಾಜ್ಯದಲ್ಲಿ ೭೨೬೨ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪಾಸಿಟಿವ್ ಪ್ರಮಾಣ ಶೇ. ೧.೪೧ ರಷ್ಟು ಇದೆ. ಬೆಂಗಳೂರಿನಲ್ಲಿ ೨,೩೨೧ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಪೈಕಿ ೮೦ ಮಂದಿಗೆ ಸೋಂಕು ದೃಢಪಟ್ಟಿದೆ. ಶಿವಮೊಗ್ಗ, ಚಾಮರಾಜನಗರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ೨ ಪ್ರಕರಣ, ವಿಜಯಪುರದಲ್ಲಿ ೧. ತುಮಕೂರಿನಲ್ಲಿ ೧, ಮೈಸೂರಿನಲ್ಲಿ ೩, ಮಂಡ್ಯದಲ್ಲಿ ೮ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೊರೊನಾ ಸೋಂಕಿತರಲ್ಲಿ ೪೨೨ ಮಂದಿ ಮನೆ ಆರೈಕೆಗೆ ಒಳಗಾದರೆ, ೫೭ ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ೧೯ ಮಂದಿ ತೀವ್ರ ನಿಗಾ ಘಟಕದಲ್ಲಿ ಹಾಗೂ ೩೮ ಮಂದಿ ಸಾಮಾನ್ಯ ವಾರ್ಡ್ನಲ್ಲಿದ್ದಾರೆ. ಕೊರೊನಾ ಸೋಂಕಿತರಲ್ಲಿ ೮೭ ಮಂದಿ ಚೇತರಿಸಿಕೊಂಡಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
<><><><>
ಹಿಂದೂಸ್ತಾನ್ ಸಮಾಚಾರ್
