
ರಾಮನಗರ, 23 ನವೆಂಬರ್ (ಹಿ.ಸ):
ಆ್ಯಂಕರ್ :
ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ರಾಮನಗರ ಜಿಲ್ಲೆಯಾದ್ಯಂತ ಇಂದು ಪ್ರಾರಂಭವಾಗಲಿದೆ ಎಂದು ಐಎಎಸ್ ಅಧಿಕಾರಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರಭಾರಿ ವಿಜಯ ಕುಮಾರ್ ಸಿದ್ದಪ್ಪ ಭೋವಿಕಟ್ಟಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಗ್ರಾಮೀಣ ಭಾಗ ಮತ್ತು ನಗರ ಪ್ರದೇಶಗಳಲ್ಲಿರುವ ವಿವಿಧ ಬ್ಯಾಂಕುಗಳ ಮೂಲಕ ನಿರಂತರವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಪಡೆದಿರುವ ಫಲಾನುಭವಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕಳೆದ ೧೦ ವರ್ಷಗಳಲ್ಲಿ ಜಾರಿಗೆ ತಂದಿರುವ ಜನಪರ ಕಲ್ಯಾಣ ಯೋಜನೆಗಳನ್ನು ಕಟ್ಟಕಡೆಯ ಫಲಾನುಭವಿಗಳಿಗೆ ತಲುಪಿಸಲು ಹಮ್ಮಿಕೊಂಡಿರುವ ’ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯು ನಿನ್ನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್
