ರಾಯಚೂರು, 28 ಡಿಸೆಂಬರ್(ಹಿ.ಸ):
ಆ್ಯಂಕರ್: 1973ರ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರನ್ವಯ ರಾಯಚೂರು ನಗರದಲ್ಲಿ ಒಟ್ಟು-08 ಪರೀಕ್ಷೆ ಕೇಂದ್ರಗಳಲ್ಲಿ ಡಿ.30 ರಂದು 2023ನೇ ಸಾಲಿನ ಸಹಕಾರ ಇಲಾಖೆಯ, ಸಹಾಕರ ಸಂಘಗಳ ನಿಬಂಧಕರ ಗ್ರೂಪ್-ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ 200 ಮೀಟರ್ ಸುತ್ತುವರೆದ ಪ್ರದೆಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಈ ಪರೀಕ್ಷೆ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಈ ಷರತ್ತಿಗೊಳಪಟ್ಟು, ಈ ಪರೀಕ್ಷೆ ಕೇಂದ್ರಕ್ಕೆ, ನಿಯೋಜಿಸಿದ ಸಿಬ್ಬಂದಿಗಳು ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಯಾರು ನಿಷೇಧಿತ ಪ್ರದೇಶವನ್ನು ಪ್ರವೇಶಿಸಕೂಡದು, ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ ಎಲ್ಲಾ ಝರಾಕ್ಸ್ ಅಂಗಡಿಗಳನ್ನು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷೆ ಸಮಯದಲ್ಲಿ ಕಡ್ಡಾಯವಾಗಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
