ರಾಯಚೂರು, 11 ಡಿಸೆಂಬರ್(ಹಿ.ಸ):
ಆ್ಯಂಕರ್ : ರಾಯಚೂರು: ವಸತಿ ನಿಲಯದಲ್ಲಿ ಆಹಾರ ಸೇವಿಸಿ 10ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ. ಬಾಲಕಿಯರ ವಸತಿ ನಿಲಯದಲ್ಲಿ ಭಾನುವಾರ ಮಧ್ಯಾಹ್ನದ ಆಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿ ಪಟ್ಟಣದಲ್ಲಿ ನಡೆದಿದೆ.
ತಕ್ಷಣವೇ ವಿದ್ಯಾರ್ಥಿಯರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
