ಚಿಕ್ಕಬಳ್ಳಾಫುರ,26ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಸುಮೊದಲ್ಲಿದ್ದ ಐವರು ಮೃತಪಟ್ಟಿದ್ದರೆ, ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿತ್ತು. ಆದ್ರೆ, ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬಂದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿ ರಭಸಕ್ಕೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 5ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಇನ್ನು ಮೃತಪಟ್ಟವರ ಹೆಸರು, ಎಲ್ಲಿಯವರು ಎಂದು ತಿಳಿದುಬರಬೇಕಿದೆ.
ಹಿಂದೂಸ್ತಾನ್ ಸಮಾಚಾರ್
