
ಬೆಂಗಳೂರು, 9 ಡಿಸೆಂಬರ್(ಹಿ.ಸ):
ಆ್ಯಂಕರ್ :ಅಗಲಿದ ಹಿರಿಯ ಚೇತನ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು ಮತ್ತು ಲೀಲಾವತಿ ಮೊಮ್ಮಗ ಯುವರಾಜ್ ಆಗಮಿಸಿದ್ದಾರೆ. ನಿನ್ನೆ ರಾತ್ರಿಯೇ ಅವರು ಚೆನ್ನೈನಿಂದ ಹೊರಟು ನೆಲಮಂಗಲ ತಲುಪಿ, ಇಂದು ಅಂತಿಮ ದರ್ಶನ ಪಡೆದಿದ್ದಾರೆ.
ವಿನೋದ್ ರಾಜ್ ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್
