
ಬೆಂಗಳೂರು , 20ನವೆಂಬರ್ (ಹಿ.ಸ):
ಆ್ಯಂಕರ್ :
ದೇಶಾದ್ಯಂತ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ವಿಶೇಷ ಕಾರ್ಯಕ್ರಮದಡಿ ಕರ್ನಾಟಕದಲ್ಲಿಂದು ಗ್ರಾಮ ಮಟ್ಟದಲ್ಲಿ ’ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಪ್ರಚಾರ ಆಂದೋಲನ ನಡೆಯಲಿದೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾದ ಅರ್ಹ ನಾಗರಿಕರಿಗೆ ಅರಿವು ಮೂಡಿಸಿ, ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಮಾಡುವುದು, ವಿವಿಧ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸುವುದು ಈ ಆಂದೋಲನದ ಉದ್ದೇಶವಾಗಿದೆ.
ಹಿಂದೂಸ್ತಾನ್ ಸಮಾಚಾರ್
