ಹೊಸಪೇಟೆ, 25 ಡಿಸೆಂಬರ್(ಹಿ.ಸ):
ಆ್ಯಂಕರ್ : ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಾಳೆ ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ನಾಳೆ ಮಧ್ಯಾಹ್ನ 1 ಗಂಟೆಗೆ ಹೊಸಪೇಟೆಗೆ ಆಗಮಿಸಿ, 1.30 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿಜಯನಗರ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ 6.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳಸುವರು.
