ಕೋಲಾರ, ೧೭ ಅಕ್ಟೋಬರ್ (ಹಿ.ಸ) :
ಆ್ಯಂಕರ್ : ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ೨೦೨೩-೨೪ ನೇ ಸಾಲಿನಲ್ಲಿ ಒಟ್ಟು ೪೩ ಪ್ರಕರಣಗಳು ದಾಖಲಾಗಿದ್ದು ಅವುಗಳಲ್ಲಿ ೨೮ ಪ್ರಕರಣಗಳು ಇಥ್ಯರ್ಥ ಗೊಂಡಿರುತ್ತವೆ. ೧೫ ಪ್ರಕರಣಗಳು ಬಾಕಿ ಇವೆ. ಇದರಲ್ಲಿ ಬಂಗಾರಪೇಟೆ ತಾಲ್ಲೂಕಿನಲ್ಲಿ ಒಂದೂ ಪ್ರಕರಣ ದಾಖಲಾಗದಿರುವುದಕ್ಕಾಗಿ ಅಭಿನಂದನೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ೬ ಸಖಿ ಒನ್ ಸ್ಟಾಪ್ ಸೆಂಟರ್ ಗಳಲ್ಲಿ ಜುಲೈ ಯಿಂದ ಸೆಪ್ಟೆಂಬರ್ ೨೦೨೩ರವರೆಗೆ ೫೪ ವಿವಿಧ ಬಗೆಯ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ೧೮ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪೊಲೀಸ್ ಠಾಣೆ ಗಳಲ್ಲಿ ೫ ಹಾಗೂ ಇಥ್ಯರ್ಥ ಮಾಡಿದ ಪ್ರಕರಣಗಳು ೨೨ ಆಗಿವೆ. ಮಾಲೂರಿನಲ್ಲಿ ಸ್ಥಾಪಿಸಲಾದ ಸ್ವಾಧಾರಗೃಹ ದಲ್ಲಿ ಪ್ರಸಕ್ತ ಸಾಲಿನಲ್ಲಿ ೪೦ ಮಹಿಳಾ ಮತ್ತು ಮಕ್ಕಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಒಟ್ಟು ೧೨ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು ೬ ಪ್ರಕರಣಗಳನ್ನು ತಡೆದು ಸಂಬAಧಿಸಿದ ಠಾಣೆಗಳಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ರಾಷ್ಟ್ರೀಯ ಪೋಷಣ್ ಅಭಿಯಾನದಡಿ ಜಿಲ್ಲೆಯ ಅರ್ಹ ಶೇ ೯೭.೬ ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲಾಗಿದೆ.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ ೯೧.೨೬ ರಷ್ಟು ಪ್ರಗತಿ ಸಾಧಿಸಲಾಗಿದೆ. ಎಲ್ಲ ಸಿಡಿಪಿ ಒ ಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಕಾಲೇಜುಗಳಲ್ಲಿ ಮೇಲಿನ ಎಲ್ಲ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಲು ಸೂಚಿಸಿದರು. ಬಾಲ್ಯ ವಿವಾಹ ಕಾಯ್ದೆ ಬಗ್ಗೆ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್ ಹೊಸಮನಿ, ಜಿಲ್ಲಾ ಆರೋಗ್ಯಧಿಕಾರಿ ಡಾ. ಜಗದೀಶ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ. ನಾರಾಯಣ ಸ್ವಾಮಿ,ಎಲ್ಲ ಸಿ ಡಿ ಪಿ ಓ ಗಳು, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
