• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ – Hindusthan Samachar Kannada
Regional

ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ – Hindusthan Samachar Kannada

CliQ INDIA
Last updated: October 30, 2023 10:30 pm
CliQ INDIA
Share
2 Min Read
SHARE

ಹೊಸಪೇಟೆ, 30 ಅಕ್ಟೋಬರ್ (ಹಿ.ಸ):

ಆ್ಯಂಕರ್ : ವಿಶೇಷ ಮತದಾರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ಪರಿಶೀಲನೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಹೇಳಿದ್ದಾರೆ.

ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ -2024ಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷದವರೊಂದಿಗೆ ಹಮ್ಮಿಕೊಂಡಿದ್ದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರ್ಹತಾ ದಿನಾಂಕ: 01.01.2024ರ ಸಂಕ್ಷೀಪ್ತ ಮತದಾರ ಪಟ್ಟಿ ಪರಿಷ್ಕರಣೆಯು ಜುಲೈ 21 ರಿಂದ ಪ್ರಾರಂಭವಾಗಿ ಕರಡು ಮತದಾರ ಪಟ್ಟಿ ಮುದ್ರಣದವರೆಗೆ ವಿಜಯನಗರ ಜಿಲ್ಲೆಯ 88-ಹಡಗಲಿ, 89- ಹಗರಿಬೊಮ್ಮನಹಳ್ಳಿ, 90-ವಿಜಯನಗರ, 96-ಕೂಡ್ಲಿಗಿ, 104-ಹರಪನಹಳ್ಳಿ ವಿಧಾನಸಭಾ ಕ್ಷೇತ್ರಗಳು ಒಳಗೊಂಡು 5,49,719 ಪುರುಷ ಮತದಾರರು, 5,50,045 ಮಹಿಳೆಯರು ಹಾಗೂ ಇತರೆ 142 ಸೇರಿ ಜಿಲ್ಲೆಯಲ್ಲಿ ಒಟ್ಟು 10,99,906 ಮತದಾರರಿದ್ದಾರೆ. ವಿಜಯನಗರ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಈ ಹಿಂದೆ ಒಟ್ಟು 1219 ಮತಗಟ್ಟೆಗಳಿದ್ದು, ಪ್ರಸ್ತುತ ಮತಗಟ್ಟೆ ನವೀಕರಣ ಬಳಿಕ ಒಟ್ಟು 1234 ಮತಗಟ್ಟೆಗಳಿವೆ. ಇದರಲ್ಲಿ 15 ಮತಗಟ್ಟೆಗಳನ್ನು ಹೆಚ್ಚುವರಿ ಮತಗಟ್ಟೆಗಳನ್ನಾಗಿ ಆಯೋಗದಿಂದ ಅನುಮೋದನೆ ನೀಡಲಾಗಿರುತ್ತದೆ ಎಂದರು.

ಜಿಲ್ಲೆಯಲ್ಲಿ ಹೊಸದಾಗಿ ನೋಂದಣಿ ಮಾಡಿಸಿಕೊಂಡ ಮತದಾರರ ವಿವರದನ್ವಯ 14,239 ಗಂಡು, 16,755 ಹೆಣ್ಣು ಸೇರಿ ಒಟ್ಟು 30,993 ಮತದಾರರು. ನಮೂನೆ -7ರಲ್ಲಿ ಮರಣ, ಸ್ಥಳಾಂತರ, ಎರಡು ಕಡೆಯಿರುವ ಮತದಾರ ಹೆಸರುಗಳನ್ನು ಮತದಾರ ಪಟ್ಟಿಯಿಂದ ಒಟ್ಟು 7029 ಮತದಾರರನ್ನು ಕೈಬಿಡಲಾಗಿರುತ್ತದೆ. ನಮೂನೆ-8 ರ ಮೂಲಕ ತಿದ್ದುಪಡಿಯಲ್ಲಿ ಒಟ್ಟು 15,499 ಮತದಾರರನ್ನು ಸರಿಪಡಿಸಲಾಗಿರುತ್ತದೆ. ಹೊಸದಾಗಿ 17,745 ಯುವ ಮತದಾರರ ಸೇರ್ಪಡೆ, 182 ವಿಕಲಚೇತನ ಮತದಾರರು ಮತ್ತು 397 ಸೇವಾ ಮತದಾರರ ನೋಂದಣಿ ಆಗಿರುತ್ತವೆ. ಕರಡು ಮತದಾರ ಪಟ್ಟಿ ಪುಚುರ ಪಡಿಸಿದ ನಂತರ ಮತದಾರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ಪರಿಶೀಲನೆ ಮಾಡಿಕೊಳ್ಳಲು ಹಾಗೂ ಅದಕ್ಕೆ ಯಾವುದಾದರು ಆಕ್ಷೇಪಣೆಗಳಿದ್ದರೆ ಆಯೋಗದ ವೇಳಾಪಟ್ಟಿಯಂತೆ ಅ.27 ರಿಂದ ಡಿಸೆಂಬರ್ 09ರ ವರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ನಂತರ ಆಯೋಗದ ವೇಳಾ ಪಟ್ಟಿಯಂತೆ 2024ರ ಜನವರಿ 5ರಂದು ಅಂತಿಮ ಮತದಾರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದು ತಿಳಿಸಿದರು.

ಆಯೋಗ ನಿಗದಿಪಡಿಸಿರುವ ವಿಶೇಷ ಮತದಾರ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ನವೆಂಬರ್ 18 ಮತ್ತು 19ರಂದು ಹಾಗೂ ಡಿಸೆಂಬರ್ 2 ಮತ್ತು 3ರಂದು ಜಿಲ್ಲೆಯ ಒಟ್ಟು 1234 ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆವರೆಗೆ ಹಾಜರಿದ್ದು, ಕರಡು ಮತದಾರ ಪಟ್ಟಿಯ ನಂತರ ಹೊಸ ಅರ್ಜಿಗಳನ್ನು ಪಡೆಯಲಾಗುತ್ತದೆ. ನಿರಂತರವಾಗಿ ಆನ್ ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

You Might Also Like

ಮೇ 08 ರಂದು ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ | BulletsIn
ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕದ ಹಲವೆಡೆ ಭಾರಿ ಮಳೆ, ಯೆಲ್ಲೋ ಅಲರ್ಟ್
ರೋಟರಿ ಕೋಲಾರ ಸೆಂಟ್ರಲ್ ನೂತನ ಅಧ್ಯಕ್ಷರಾಗಿ ಪದಗ್ರಹಣ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಜನ್ಮದಿನ ; ಪ್ರಧಾನಿ ಮೋದಿ ಶುಭ ಹಾರೈಕೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಎರಡು ದಿನಗಳ ಗುಜರಾತ್ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ
Next Article ಮಕ್ಕಳಿಗೆ ಹೆಚ್ಚಿನ ಕರಾಟೆ ತರಬೇತಿ-ರಾಘವೇಂದ್ರ ಹಿಟ್ನಾಳ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?