ಮೈಸೂರು,15 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ, ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್ ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿಡಿ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
