• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಶಸ್ರಚಿಕಿತ್ಸೆ ಹೆರಿಗೆ ಪ್ರಮಾಣ ಹೆಚ್ಚಳ ; ಜಿಲ್ಲಾಧಿಕಾರಿ ಅಸಮಧಾನ
Regional

ಶಸ್ರಚಿಕಿತ್ಸೆ ಹೆರಿಗೆ ಪ್ರಮಾಣ ಹೆಚ್ಚಳ ; ಜಿಲ್ಲಾಧಿಕಾರಿ ಅಸಮಧಾನ

CliQ INDIA
Last updated: November 6, 2025 12:45 pm
CliQ INDIA
Share
3 Min Read
SHARE

ಕೋಲಾರ, 0೫ ನವೆಂಬರ್ (ಹಿ.ಸ.) :

ಆಂಕರ್ : ತಾಯಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮಗಳಡಿ ಜಿಲ್ಲೆಯಲ್ಲಿ ಸಂಪೂರ್ಣ ಲಸಿಕಾಕರಣ ಶೇ. ೯೫ರಷ್ಟು ಸಾಧನೆಯೊಂದಿಗೆ ಉತ್ತಮ ಪ್ರಗತಿ ಕಂಡು ಬಂದಿದ್ದರೂ, ಒಟ್ಟು ಹೆರಿಗೆಗಳಲ್ಲಿ ಸಿ-ಸೆಕ್ಷನ್ (ಶಸ್ರಚಿಕಿತ್ಸೆ ಮೂಲಕ ಹೆರಿಗೆ) ಪ್ರಮಾಣ ಶೇ. ೫೬ಕ್ಕೆ ಏರಿರುವುದು ಗಂಭೀರ ಕಳವಳಕಾರಿ ವಿಷಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಕಳವಳ ವ್ಯಕ್ತಪಡಿಸಿದರು.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮಿಷನ್ನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಯು ಮಂಡಿಸಿದ ವರದಿಯನ್ನು ಪರಿಶೀಲಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು ೧೭.೫೪ ಲಕ್ಷ ಅಂದಾಜು ಜನಸಂಖ್ಯೆ ಇದ್ದು, ಪ್ರಸ್ತುತ ೧೦ ’ನಮ್ಮ ಕ್ಲಿನಿಕ್’ಗಳು ಸೇರಿದಂತೆ ೭೮ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ತಾಯಿ ಮತ್ತು ಶಿಶು ಆರೋಗ್ಯ: ಏಪ್ರಿಲ್ನಿಂದ ಸೆಪ್ಟೆಂಬರ್ ೨೦೨೫ರ ಅವಧಿಯಲ್ಲಿ ಗರ್ಭಿಣಿಯರ ನೋಂದಣಿ ಶೇ. ೯೨ರಷ್ಟಾಗಿದೆ. ಸಂಪೂರ್ಣ ನಾಲ್ಕು ಎಎನ್ಸಿ ತಪಾಸಣೆಗಳನ್ನು ಶೇ. ೯೧ರಷ್ಟು ತಾಯಂದಿರು ಪಡೆದಿದ್ದಾರೆ.

ಜಿಲ್ಲೆಯಲ್ಲಿ ಸಂಪೂರ್ಣ ಲಸಿಕಾಕರಣದ ಗುರಿ ಶೇ. ೯೫ರಷ್ಟು ಸಾಧನೆಯಾಗಿದೆ. ಶಿಶು ನೋಂದಣಿಯಲ್ಲಿ ಕೋಲಾರ ತಾಲ್ಲೂಕು ಶೇ. ೧೦೭ರಷ್ಟು ಸಾಧನೆ ಮಾಡಿರುವುದು ಶ್ಲಾಘನೀಯ ಎಂದರು.

ಜಿಲ್ಲೆಯ ಶಿಶು ಮರಣ ದರ (Iಒಖ) ಪ್ರತಿ ೧,೦೦೦ ಜೀವಂತ ಜನನಗಳಿಗೆ ೧೦ರಷ್ಟಿದ್ದು, ತಾಯಂದಿರ ಮರಣ ದರ (ಒಒಖ) ಪ್ರತಿ ೧,೦೦,೦೦೦ ಜೀವಂತ ಜನನಗಳಿಗೆ ೨೪ರಷ್ಟಿದೆ. ಈ ಅಂಕಿಅಂಶಗಳನ್ನು ಮತ್ತಷ್ಟು ಕಡಿಮೆ ಮಾಡಲು ಕ್ರಮವಹಿಸಲು ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು ಹೆರಿಗೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. ೫೬ರಷ್ಟು ಸಿ-ಸೆಕ್ಷನ್ಗಳು ಆಗಿವೆ. ಇದು ಅತ್ಯಂತ ಆತಂಕಕಾರಿ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಈ ಪ್ರಮಾಣ ಶೇ. ೭೩ರಷ್ಟಿ ರುವುದು ಕಳವಳಕಾರಿ. ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. ೪೨ರಷ್ಟಿದೆ. ಕೋಲಾರ ತಾಲ್ಲೂಕು ಶೇ. ೬೬ರಷ್ಟು ಅತಿ ಹೆಚ್ಚು ಸಿ-ಸೆಕ್ಷನ್

ಪ್ರಮಾಣವನ್ನು ದಾಖಲಿಸಿದೆ, ಎಂದು ಹೇಳಿದರು.

ಶಸ್ತ್ರಚಿಕಿತ್ಸೆ ಅಗತ್ಯವಿದ್ದಾಗ ಮಾತ್ರ ಸಿ-ಸೆಕ್ಷನ್ ಮಾಡಬೇಕು. ಅನಗತ್ಯ ಸಿ-ಸೆಕ್ಷನ್ಗಳನ್ನು ತಡೆಗಟ್ಟಲು ಎಲ್ಲ ಆಸ್ಪತ್ರೆಗಳು, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳು, ವೈಜ್ಞಾನಿಕ ಮತ್ತು ವೈದ್ಯಕೀಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಕೂಡಲೇ ಸೂಕ್ತ ಪರಿಶೀಲನಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಜನವರಿಯಿಂದ ಸೆಪ್ಟೆಂಬರ್ವರೆಗೆ ಡೆಂಗ್ಯೂನ ೯೯ ಪ್ರಕರಣಗಳು ಮತ್ತು ಚಿಕ್ಕನ್ಗುನ್ಯಾದ ೧೧ ಪ್ರಕರಣಗಳು ದೃಢಪಟ್ಟಿವೆ. ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಯಿತು. ಜಿಲ್ಲೆಯಲ್ಲಿ ಈ ಅವಧಿಯಲ್ಲಿ ೯,೦೭೬ ನಾಯಿ ಕಡಿತ ಮತ್ತು ೨೩೨ ಹಾವು ಕಡಿತ ಪ್ರಕರಣಗಳು ವರದಿಯಾಗಿವೆ. ಇಂತಹ ಪ್ರಕರಣಗಳ ನಿರ್ವಹಣೆ ಮತ್ತು ಲಸಿಕೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು.

ಇದೆ ಸಂದರ್ಭದಲ್ಲಿ ತಂಬಾಕು ಪರಿಣಾಮ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಶಸ್ತ್ರಚಿಕಿತ್ಸೆಕರಾದ ಡಾ. ಜಗದೀಶ್, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಚಾರಿಣಿ, ಜಿಲ್ಲಾಮಲೇರಿಯಾ ನಿಯಂತ್ರಣ ಅಧಿಕಾರಿಗಳಾದ ಡಾ|| ರವಿ ಕುಮಾರ್ ಎಂ.ವಿ,ಜಿಲ್ಲಾಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ|| ಪ್ರಸನ್ನ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ|| ನಾರಯಣ ಸ್ವಾಮಿ, ಡಾ|| ರಮೇಶ್ ಬಾಬು, ಡಾ|| ಸುನೀಲ್, ಡಾ|| ಸುಗುಣ, ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಗಳಾದ ವೆಂಕಟಾ ಚಲಪತಿಎಸ್, ಕೆ.ಎಸ್.ಆರ್.ಟಿ.ಸಿ ಆಡಳಿತಾಧಿಕಾರಿಗಳಾದ ಭಾಗ್ಯಲಕ್ಷ್ಮೀ ಎಂ.ವಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ

ಮಹಮದ್ ಪಿ ಸೇರಿದಂತೆ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ; ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮಿಷನ್ನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್

You Might Also Like

ರಾಜ್ಯ ಸರ್ಕಾರದಿಂದ ಶರವೇಗದ ತುಷ್ಟೀಕರಣ : ಪ್ರಲ್ಹಾದ ಜೋಶಿ ಕಿಡಿ
ಕಾಂಗ್ರೆಸ್ ಶಾಸಕ ಪಾಟೀಲ್ ವಿರುದ್ಧ ಗಾಣಿಗ ಸಮಾಜದ ಪ್ರತಿಭಟನೆ
ಮೀನುಗಾರಿಕೆ ಇಲಾಖೆ ವತಿಯಿಂದ ಅರ್ಜಿ ಆಹ್ವಾನ
ರಾಷ್ಟ್ರೀಯ ಗ್ರಾಹಕರ ದಿನ ಆಚರಣೆ – Hindusthan Samachar Kannada
ಬಿಜೆಪಿ ಲೋಕಸಭೆ ಕ್ಷೇತ್ರಗಳ ಮುಖಂಡರ ಸಭೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಿಹಾರ ಚುನಾವಣಾ ಪ್ರಚಾರದಲ್ಲಿ ಮೋದಿ-ಶಾ – Hindusthan Samachar Kannada
Next Article ಎಂಎಲ್ಎಸ್ ಬೆಸ್ಟ್ XI ತಂಡದ ನಾಯಕನಾಗಿ ಲಿಯೋನೆಲ್ ಮೆಸ್ಸಿ ಆಯ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?