
ನವದೆಹಲಿ, 6 ನವೆಂಬರ್ (ಹಿ.ಸ):
ಆ್ಯಂಕರ್ :
ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್ನಲ್ಲಿ ಇದೀಗ ಶಾಸಕ ಮುನಿರತ್ನರ ಹೆಸರು ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್ ಒತ್ತಾಯಿಸಿದ್ದಾರೆ. ಹುಣಸಮಾರನಹಳ್ಳಿಯಲ್ಲಿ ಪರವಾನಗಿ ಪಡೆಯದೆ ಬಂಡೆಗಳು ಸ್ಫೋಟಿಸಲಾಗಿತ್ತು. ಈ ಸಂಬಂಧ ವರದಿ ಸಿದ್ಧಪಡಿಸಿ ಡಿಸಿಗೆ ಕೊಲೆಯಾದ ಪ್ರತಿಮಾ ನೀಡಿದ್ದರು. ಹುಣಸಮಾರನಹಳ್ಳಿ ಪ್ರಕರಣದಲ್ಲಿ ಶಾಸಕ ಮುನಿರತ್ನ 2ನೇ ಆರೋಪಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು. ರಾಜಸ್ವಧನದಲ್ಲೂ ನಷ್ಟ ಉಂಟು ಮಾಡಿದ್ದಾರೆಂದು ವರದಿಯಲ್ಲಿ ಆರೋಪಿಸಲಾಗಿತ್ತು. ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಬಗ್ಗೆ ಹಲವು ಅನುಮಾನ ವ್ಯಕ್ತವಾಗುತ್ತಿದೆ. ಎಲ್ಲ ಆಯಾಮದಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ನೋಟಿಸ್ ನೀಡಿ ತನಿಖೆ ನಡೆಸುವಂತೆ ಸೂರ್ಯ ಮುಕುಂದರಾಜ್ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
