
ರಾಯಚೂರು,, 17 ಜನವರಿ(ಹಿ.ಸ):
ಆ್ಯಂಕರ್: 2023-24ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಎಸ್.ಎಸ್.ಪಿ ತಂತ್ರಾಂಶದಡಿ ಮೆಟ್ರಿಕ್ ನಂತರದ ಶಿಷ್ಯವೇತನಕ್ಕಾಗಿ ಅರ್ಹಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ರೂ. 2.50 ಲಕ್ಷಗಳು ಮೀರಬಾರದು. ಹೊರ ರಾಜ್ಯದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜಿಲ್ಲಾ ಕಛೇರಿಯಿಂದ ಇ-ಅಟೇಸ್ಟೇಷನ್ ಮಾಡಿಸಿ, ಸಂಬಂಧಪಟ್ಟ ವಾಸಸ್ಥಳದ ತಾಲೂಕುಗಳ ಇಲಾಖೆಯ ಕಛೇರಿಯಲ್ಲಿ ಶಿಷ್ಯವೇತನ ಮಂಜೂರಾತಿಗಾಗಿ ಶೈಕ್ಷಣಿಕ & ಅವಶ್ಯಕ ದಾಖಲಾತಿಗಳನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ https:sp.postmatric.karnataka.gov.in/2324_sa/signin.aspx ವೆಬ್ಸೈಟ್ ಮೂಲಕ ಅರ್ಜಿಯನ್ನು ಮಾ.31ರೊಳಗಾಗಿ ಅರ್ಜಿಯನ್ನು ಅಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
