ಹೊಸಪೇಟೆ, 15 ನವೆಂಬರ್ (ಹಿ.ಸ):
ಆ್ಯಂಕರ್ : ಕನ್ನಡ ಮತ್ತು ಸಂಸ್ಕøತಿಇಲಾಖೆಯಿಂದ ಸಂಘ-ಸಂಸ್ಥೆಗಳಿಗೆ ಧನಸಹಾಯಕ್ಕಾಗಿಅರ್ಜಿಆಹ್ವಾನಿಸಲಾಗಿದೆ.
ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾμÁ ಸಂವರ್ಧನ, ಕಲೆ, ಸಾಹಿತ್ಯ, ಸಂಗೀತ, ಜಾನಪದ ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪೆÇ್ರೀತ್ಸಾಹರೂಪದಲ್ಲಿ ಸಹಾಯಧನ ನೀಡಿತನ್ಮೂಲಕರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣಉಂಟುಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳನ್ನು ಪೆÇ್ರೀತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತುಗಿರಿಜನಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು Sevasindhu.karnataka.gov.in ಮುಖಾಂತರಡಿಸೆಂಬರ್ 13ರ ವರೆಗೆ ಕಾಲಾವಕಾಶ ನೀಡಲಾಗಿದೆ.
ಸರ್ಕಾರದಆದೇಶದಂತೆ ಮಾರ್ಗಸೂಚಿಯನ್ನು ಸೇವಾಸಿಂಧು ಪೆÇೀರ್ಟಲ್ ಹಾಗೂ ಇಲಾಖೆಯ ವೆಬ್ಸೈಟ್: www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ 08022279954, 9986837037, 8792662814, 8792662816, 08022213530 ಅನ್ನು ಹಾಗೂ ಆಯಾಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯೊಳಗೆ ಸಂಪರ್ಕಿಸಬಹುದಾಗಿದೆಎಂದುಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
