ಸಂಡೂರು, 16 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಸಾರ್ವಜನಿಕರ ಸರ್ಕಾರೇತರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕಾಗಿ ತಾಲ್ಲೂಕು ಮಟ್ಟದ `ಜನತಾ ದರ್ಶನ’ ಸೋಮವಾರ ಪಟ್ಟಣದಲ್ಲಿ ನಡೆದು 153 ಅರ್ಜಿಗಳು ಸ್ವೀಕೃತಗೊಂಡು, 25 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಮಾಡಲಾಯಿತು.
ಸಂಡೂರು ಶಾಸಕ ಈ. ತುಕರಾಂ ಅವರು `ಜನತಾ ದರ್ಶನ’ಕ್ಕೆ ಚಾಲನೆ ನೀಡಿ, ಸಾರ್ವಜನಿಕರು ಯಾವುದೇ ಕುಂದುಕೊರತೆಗಳಿದ್ದಲ್ಲಿ ತಾಲೂಕು ಮಟ್ಟದಲ್ಲಿ ನಡೆಯುವ ಜನತಾ ದರ್ಶನದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಲು ಮುಕ್ತ ಅವಕಾಶವಿದೆ ಎಂದರು.
ಜನತಾ ದರ್ಶನದ ವೇಳೆ ದಾಖಲಾದ ಕುಂದುಕೊರತೆಗಳ ಸಮಗ್ರ ಸಾರ್ವಜನಿಕ ಕುಂದುಕೊರತೆ ಪರಿಹಾರ ವ್ಯವಸ್ಥೆ (ಐಪಿಜಿಆರ್ಎಸ್) ತಂತ್ರಾಂಶಕ್ಕೆ ಲಾಗ್ಇನ್ ಮಾಡಿ, ಆಯಾ ಇಲಾಖೆಗೆ ತ್ವರಿತವಾಗಿ ತಲುಪಿಸಲಾಗುವುದು ಎಂದು ಹೇಳಿದರು.
ತಾಲೂಕಿನಲ್ಲಿ ತೀವ್ರವಾದ ಬರ ಕಾಣಿಸಿಕೊಂಡಿದ್ದು ಮುಂದಿನ ದಿನಗಳಲ್ಲಿ ಸಂಡೂರು ಭಾಗದ 44 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಅಗತ್ಯ ಯೋಜನೆಯನ್ನು ಸಿದ್ದಪಡಿಸಿಕೊಳ್ಳಬೇಕು ಎಂದರು.
ಸಂಡೂರು ತಾಲೂಕಿನಲ್ಲಿ 416 ಶಿಕ್ಷಕರಿದ್ದಾರೆ. ತಾಲೂಕಿನಲ್ಲಿ ದೈಹಿಕ ಶಿಕ್ಷಕರ ಕೊರತೆ ಇದೆ. ಜಿಲ್ಲಾ ಖನಿಜ ಪ್ರತಿಷ್ಠಾನ ಅನುದಾನದಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು. ಸಂಡೂರು – ಹೊಸಪೇಟೆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಉಂಟಾಗುತ್ತಿರುವ ಅಡೆತಡೆಯನ್ನು ನಿವಾರಣೆ ಮಾಡಬೇಕು. ತಾಲೂಕಿನ ಆಸ್ಪತ್ರೆಗಳಲ್ಲಿ ಆಂಬ್ಯುಲೆನ್ಸ್ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದರು.
ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 153 ಅರ್ಜಿಗಳು ಸಲ್ಲಿಕೆಯಾಗಿದ್ದು, 25 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಲಾಯಿತು. ಇವುಗಳಲ್ಲಿ ಕಂದಾಯ ಇಲಾಖೆ 103, ತಾಲ್ಲೂಕು ಪಂಚಾಯಿತಿ 21, ಅರಣ್ಯ ಇಲಾಖೆ 2, ಡಿಎಂಜಿ 03, ಪುರಸಭೆ 05, ಶಿಕ್ಷಣ ಇಲಾಖೆ 05, ಸಿಡಿಪಿಒ 02, ಕೃಷಿ ಮತ್ತು ಪೊಲೀಸ್ ಇಲಾಖೆ 01, ಲೋಕೋಪಯೋಗಿ ಇಲಾಖೆ 03, ಜೆಸ್ಕಾಂ 03, ಸರ್ವೇ ಇಲಾಖೆ 01, ಪಶು ಸಂಗೋಪನಾ ಇಲಾಖೆ 01, ಆರೋಗ್ಯ ಇಲಾಖೆ 01, ಅಬಕಾರಿ ಇಲಾಖೆ 01 ಹಾಗೂ ಎನ್ಎಂಡಿಸಿ 01 ಸೇರಿದಂತೆ ಒಟ್ಟು 153 ಅರ್ಜಿ ಸ್ವೀಕಾರಗೊಂಡವು.
ಅಹವಾಲುಗಳನ್ನು ಸ್ವೀಕರಿಸಲು 20 ಕೌಂಟರ್ ತೆರೆಯಲಾಗಿತ್ತು. ಸಾರ್ವಜನಿಕರಿಗೆ ಕುಡಿಯುವ ನೀರು, ಊಟದ ವ್ಯವಸ್ಥೆ, ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಅಗ್ನಿಶಾಮಕವನ್ನು ಸ್ಥಳದಲ್ಲೇ ನಿಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಡಿವೈಎಸ್ಪಿ ಪ್ರಸಾದ್ ಗೋಖಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು, ಸಂಡೂರು ತಹಶೀಲ್ದಾರ ಅನೀಲ್ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
