• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಸದೃಢ ಆರೋಗ್ಯಕ್ಕೆ ಜೀವನ ಶೈಲಿ ಬದಲಾವಣೆಯಾಗಲಿ
Regional

ಸದೃಢ ಆರೋಗ್ಯಕ್ಕೆ ಜೀವನ ಶೈಲಿ ಬದಲಾವಣೆಯಾಗಲಿ

CliQ INDIA
Last updated: November 17, 2025 8:25 pm
CliQ INDIA
Share
3 Min Read
SHARE
ಸದೃಢ ಆರೋಗ್ಯಕ್ಕೆ ಜೀವನ ಶೈಲಿ ಬದಲಾವಣೆಯಾಗಲಿ
ಸದೃಢ ಆರೋಗ್ಯಕ್ಕೆ ಜೀವನ ಶೈಲಿ ಬದಲಾವಣೆಯಾಗಲಿ

ಬಳ್ಳಾರಿ, 17 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರಸ್ತುತದಲ್ಲಿ ನಿಯಮಿತವಾಗಿ ದೇಹ ದಂಡನೆ, ಪೌಷ್ಠಿಕ ಆಹಾರ ಸೇವನೆ ಮೂಲಕ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ವಿಭಾಗ ಹಾಗೂ ಬಳ್ಳಾರಿ ನರ್ಸಿಂಗ್ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಧುಮೇಹ ದಿನ ಅಂಗವಾಗಿ ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಜಾಗೃತಿ ವಾಕ್ ಮ್ಯಾರಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಧುಮೇಹ ಎನ್ನುವ ಅನಿಯಂತ್ರಿತ ಕಾಯಿಲೆ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಬರುತ್ತದೆ. ಮಧುಮೇಹವನ್ನು ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಪೂರ್ವದಲ್ಲಿ ಬರದಂತೆ ನಿಯಂತ್ರಣ ಮಾಡುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ದೇಹ ದಂಡನೆ ಮಾಡದೇ ಜೀವನ ನಡೆಸುವಂತಹ ಪ್ರವೃತ್ತಿ ಜನರಲ್ಲಿ ಹೆಚ್ಚಾಗಿರುವುದರಿಂದ ಮಧುಮೇಹದ ತೀವ್ರತೆ ಹೆಚ್ಚಾಗುತ್ತಿದೆ. ನಾವು ತಿನ್ನುವ ಆಹಾರ, ಜೀವನ ಶೈಲಿ ಹಾಗೂ ಸರಳ ವ್ಯಾಯಾಮದಿಂದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಮಧುಮೇಹ ಕಾಯಿಲೆಯು ಅಸಾಂಕ್ರಾಮಿಕ ರೋಗವಾಗಿದ್ದು, ಜಿಲ್ಲೆಯಲ್ಲಿ ಶೇ.20 ಕ್ಕೂ ಹೆಚ್ಚಿನ ಪ್ರಮಾಣ ಜನರು ಸಕ್ಕರೆ ಖಾಯಿಲೆಯಿಂದ ಚಿಕಿತ್ಸೆಗೆ ಒಳಪಟ್ಟಿದ್ದಾರೆ. ಹಾಗಾಗಿ 30 ವರ್ಷದ ಮೇಲ್ಪಟ್ಟವರು ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಗೃಹ-ಆರೋಗ್ಯ ಯೋಜನೆ ರೂಪಿಸಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡಿ, ಉಚಿತವಾಗಿ ಔಷದೋಪಚಾರ ಮಾಡಲಾಗುತ್ತದೆ. ದಿನನಿತ್ಯ ಪೌಷ್ಠಿಕ ಆಹಾರ ಸೇವನೆಯ ಬಗ್ಗೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಪ್ರಪಂಚದಾದ್ಯ0ತ ಮಧುಮೇಹ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ಐದು ಜನರಲ್ಲಿ ಒಬ್ಬರಿಗೆ ಮಧುಮೇಹ ಕಂಡು ಬರುತ್ತದೆ. ದಿನನಿತ್ಯ ನಾವು ಬದುಕುವ ಜೀವನದಲ್ಲಿ ಮಧುಮೇಹದ ಬಗ್ಗೆ ಜಾಗೃತಿ ಹೊಂದುವುದು ಅತೀ ಅವಶ್ಯಕವಾಗಿದೆ ಎಂದು ಹೇಳಿದರು.

ಮಧುಮೇಹ ದೇಹದ ಎಲ್ಲ ಭಾಗಗಳಿಗೆ ಬರುತ್ತದೆ. ವ್ಯಾಯಾಮದಲ್ಲಿ ತೊಡಗಿಕೊಂಡು ಡಯಟ್‌ನಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಮೂಲಕ ಮಧುಮೇಹ ಕಾಯಿಲೆಯಿಂದ ದೂರ ಉಳಿಯಬಹುದು ಎಂದು ತಿಳಿಸಿದರು.

ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಮತೋಲನ ಆಹಾರ ಸೇವನೆ ಮತ್ತು ಉತ್ತಮ ನಿದ್ರೆಯ ಜೀವನ ಶೈಲಿಯಿಂದ ಮಧುಮೇಹ ನಿಯಂತ್ರಣ ಮಾಡಬಹುದು ಎಂದರು.

ಮಧುಮೇಹ ಕಾಯಿಲೆಯು ವಂಶ ಪಾರಂಪರ್ಯವಾಗಿ, ಅನುವಂಶೀಯವಾಗಿ ಅನಿಯಮಿತ ಆಹಾರ ಸೇವನೆ, ಅತಿಯಾದ ಬೊಜ್ಜು ಹಾಗೂ ಹೆಚ್ಚಿನ ತೂಕದಿಂದ ಮಧುಮೇಹ ಖಾಯಿಲೆ ಬರುವ ಸಂಭವವಿದ್ದು, ಬಾಯಾರಿಕೆ, ಹಸಿವು, ಮಸುಕು ದೃಷ್ಟಿ ಸೇರಿದಂತೆ ಇತರೆ ಅನಾರೋಗ್ಯ ಲಕ್ಷಣಗಳು ಕಂಡು ಬ0ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಾಗೃತಿ ವಾಕ್ ಮ್ಯಾರಥಾನ್ :

ವಿಶ್ವ ಮಧುಮೇಹ ದಿನ ಅಂಗವಾಗಿ ಸಾರ್ವಜನಿಕರಲ್ಲಿ ಮಧುಮೇಹ ಕಾಯಿಲೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಸಂಗ0 ವೃತ್ತ, ಗಡಿಗಿ ಚೆನ್ನಪ್ಪ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಹೆಚ್.ಆರ್ ಗವಿಯಪ್ಪ ವೃತ್ತದಿಂದ ಮರಳಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ತಲುಪಿ ಅಂತ್ಯಗೊಡಿತು.

ಈ ಸಂದರ್ಭದಲ್ಲಿ ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಬಳ್ಳಾರಿ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಶಾಂತಮ್ಮ ಸೇರಿದಂತೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ರಂಗಭೂಮಿ ಹಿರಿಯ ಕಲಾವಿದ ಕೊಟ್ರಯ್ಯ ಹಿರೇಮಠ ನಿಧನ | BulletsIn
ಬೀದರ್ ಅಪಘಾತದಲ್ಲಿ ಮೃತ ಕುಟುಂಬಸ್ಥರಿಗೆ ಪರಿಹಾರ :ಖಂಡ್ರೆ | BulletsIn
32 ನೇಯ ವರ್ಷದ ಶರನ್ನವರಾತ್ರಿ ದಸರಾ ದರ್ಬಾರ್
ಧರ್ಮಸ್ಥಳ ಪ್ರಕರಣ ತನಿಖೆ ಮುಂದುವರಿಕೆ : ಜಿ.ಪರಮೇಶ್ವರ
ಲಕ್ಕಿ ಲಾಟರಿ ಮುಖ್ಯಮಂತ್ರಿ : ಬಿ.ಆರ್. ಪಾಟೀಲ್ ಸ್ಪಷ್ಟನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮದೀನಾ ಬಸ್ ಅಪಘಾತ ; ವಿದೇಶಾಂಗ ಸಚಿವ ಜೈಶಂಕರ್ ಸಂತಾಪ
Next Article ಮದೀನಾ ಅಪಘಾತ ; ಸಾವನ್ನಪ್ಪಿದ ಭಾರತೀಯರಿಗೆ ಪ್ರಧಾನಿ ಮೋದಿ ಸಂತಾಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?