ಬೆಂಗಳೂರು,25ನವೆಂಬರ್ (ಹಿ.ಸ):
ಆ್ಯಂಕರ್ :
ಜಾರಿ ನಿರ್ದೇಶನಾಲಯ(ಇಡಿ)ವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ರಾಜ್ಯ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಿರ್ಧಾರವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇಡಿ ಅಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದರಿಂದಲೇ ನಮ್ಮ ಸರ್ಕಾ ಈ ಕ್ರಮವನ್ನು ತೆಗೆದುಕೊಂಡಿತ್ತೆಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇಡಿಯವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸಿಬಿಐಗೆ ಕೊಡುವಂತೆ ಸೂಚನೆ ಕೊಟ್ಟಿದ್ದರಿಂದ ಆದೇಶ ಮಾಡಿದೆವು.ಇದರಲ್ಲಿ ನಿಯಮಗಳ ಉಲ್ಲಂಘನೆಯಾಗಿರುವುದು ಎಲ್ಲಿಂದ ಎಂದು ಪ್ರಶ್ನೆ ಮಾಡಿದರು.
ಹಿಂದೂಸ್ತಾನ್ ಸಮಾಚಾರ್
