• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಸಿದ್ದರಾಮಯ್ಯ ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ
Regional

ಸಿದ್ದರಾಮಯ್ಯ ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ

CliQ INDIA
Last updated: December 5, 2025 1:53 pm
CliQ INDIA
Share
2 Min Read
SHARE

ಬೆಂಗಳೂರು, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮತಿಗೇಡಿಗಳಾದರೂ ಪರವಾಗಿಲ್ಲ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಲಜ್ಜೆಗೇಡಿಗಳಾಗಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಮುಖ್ಯಮಂತ್ರಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನ ಸದನದಲ್ಲಿ ತಾವೇ ಗಂಟಾಘೋಷವಾಗಿ ಒಪ್ಪಿಕೊಂಡ ಮೇಲೂ ನಿರ್ಲಜ್ಜವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಸ್ವತಃ ತಮ್ಮ ಆರ್ಥಿಕ ಸಲಹೆಗಾರರು, ಹಿರಿಯ ಕಾಂಗ್ರೆಸ್ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಎಂದು ಸರ್ಟಿಫಿಕೇಟ್ ಕೊಟ್ಟ ಮೇಲೂ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡು ಕೂತುಕೊಳ್ಳುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಅದು ಹೋಗಲಿ ಬಿಡಿ. ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಮನಿ ಫಾರ್ ಮನೆ ಭ್ರಷ್ಟಾಚಾರವನ್ನು ಬಯಲಿಗೆಳೆದು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಷ್ಟಾದರೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಸ್ವಪಕ್ಷದ ಹಿರಿಯ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡಿದರೂ, ವಸತಿ ಸಚಿವರ ಮೇಲೆ ಕ್ರಮವೂ ಕೈಗೊಳ್ಳದೆ, ತನಿಖೆಯೂ ನಡೆಸದೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ತಾವೇ ನೇಮಕ ಮಾಡಿದ್ದ ತನಿಖಾ ಆಯೋಗ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ತಾವು ಮಾಡಿದ್ದ 40% ಕಮಿಷನ್ ಆರೋಪ ಹಸಿ ಸುಳ್ಳು ಎಂದು ವರದಿ ನೀಡಿದ ಮೇಲೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

40% ಕಮಿಷನ್ ಎಂದು ಹಸಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿ, ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಕಳೆದ 2.5 ವರ್ಷಗಳಲ್ಲಿ ನಿಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕಮಿಷನ್ ದಾಹಕ್ಕೆ ಬಲಿಯಾದ ಅಧಿಕಾರಿಗಳು, ಗುತ್ತಿಗೆದಾರರ ಪ್ರಕರಣಗಳನ್ನು ಪಟ್ಟಿ ಮಾಡುತ್ತಾ ಹೋದರೆ ಜಾಗವೇ ಸಾಕಾಗುವುದಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ, ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು. ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮದ ನಿವಾಸಿ ಸಿವಿಲ್‌ ಎಂಜಿನಿಯರ್‌ ಸಚಿನ್‌ ಮಾನಪ್ಪ ಪಾಂಚಾಳ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ.

ಕಳೆದ 30 ತಿಂಗಳುಗಳಲ್ಲಿ ನಿಮ್ಮ ಸರ್ಕಾರ ಭ್ರಷ್ಟಾಚಾರದ ಎಲ್ಲ ದಾಖಲೆಗಳನ್ನೂ ಮುರಿದಿದೆ. ನಿಮ್ಮ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳುತ್ತಾ ಹೋದರೆ ಅದಕ್ಕೆ ಅಂತ್ಯವೇ ಇಲ್ಲ, ದಿನದ 24 ಗಂಟೆಗಳು ಸಾಕಾಗುವುದಿಲ್ಲ.

ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ಅಶೋಕ ವಾಗ್ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಲೈಸೆನ್ಸ್, ವಾಹನ ಚಾಲನಾ ತರಬೇತಿ ಇನ್ನು ದುಬಾರಿ
ಜುಲೈ 10 ರಂದು ಉಚಿತ ಅರೋಗ್ಯ ತಪಾಸಣೆ
ಭಾನುವಾರದ ಭವಿಷ್ಯ – Hindusthan Samachar Kannada
ಗದಗದಲ್ಲಿ ಸರ್ವ ಧರ್ಮ ಸಾಮೂಹಿಕ ಮದುವೆ | BulletsIn
ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ : ಡಿಸಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ದೆಹಲಿಯಲ್ಲಿ ಇಂದು 23ನೇ ಭಾರತ–ರಷ್ಯಾ ಶೃಂಗಸಭೆ
Next Article ಅಸ್ಮಿತಾ ರಾಜ್ಯ ಪೆಂಕಾಕ್ ಸಿಲತ್ ಕ್ರೀಡಾಕೂಟ : ಟ್ಯಾಂಡಿಂಗ್ ಬಂಗಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?