
ತುಮಕೂರು,6 ಡಿಸೆಂಬರ್(ಹಿ.ಸ):
ಆ್ಯಂಕರ್ :
ವಿಧಾನಸಭೆ ಚುನಾವಣೆ ಬಳಿಕ ಪಕ್ಷದ ಮೇಲೆ ಮುನಿಸಿಕೊಂಡಿರುವ ವಿ ಸೋಮಣ್ಣ ಡಿಸೆಂಬರ್ 6 ನಂತರ ತಮ್ಮ ನಡೆ ಘೋಷಿಸುವುದಾಗಿ ಹೇಳಿದ್ದರು. ಇದೀಗ ಆ ದಿನಗಳು ಬಂದಿದ್ದು, ಇಂದು ಸಿದ್ಧಗಂಗಾ ಮಠದಲ್ಲಿ ತಾವು ನಿರ್ಮಿಸಿರುವ ಗುರುಭವನವನ್ನು ಇಂದು (ಡಿಸೆಂಬರ್ 06) ಉದ್ಘಾಟನೆ ಮಾಡಲಿದ್ದಾರೆ. ಸಿದ್ಧಗಂಗಾ ಮಟದಲ್ಲಿ ನಡೆಯಲಿರುವ ಈ ಉದ್ಘಾಟನಾ ಕಾರ್ಯಕ್ರಮದಲ್ಲೇ ಸೋಮಣ್ಣ ಅವರು ತಮ್ಮ ಮುಂದಿನ ರಾಜಕೀಯ ನಡೆ ಘೋಷಣೆ ಮಾಡಲಿದ್ದಾರಾ ಎನ್ನುವ ಕುತೂಹಲ ಮೂಡಿಸಿದೆ.
ತುಮಕೂರಿನ ಸಿದ್ಧಗಂಗಾ ಮಠದ ಹಳೇ ಮಠದ ಆವರಣದಲ್ಲಿ ಸೋಮಣ್ಣ ಅವರು ತಮ್ಮ ಸ್ವಂತ ಖರ್ಚಿನಲ್ಲೇ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಗುರುಭವನ ನಿರ್ಮಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಅವರೇ ಲೋಕಾರ್ಪಣೆ ಮಾಡಲಿದ್ದಾರೆ. ಲಿಂಗೈಕ್ಯ ಶಿವಕುಮಾರಸ್ವಾಮೀಜಿ ಗದ್ದುಗೆ ಪಕ್ಕದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ದೇಗುಲ ಮಠದ ಮುಮ್ಮಡಿ ನಿರ್ವಾಣ ಶ್ರೀಗಳು, ಗೃಹ ಸಚಿವ ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, MLC ರಾಜೇಂದ್ರ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
