
ಬೆಂಗಳೂರು , 28ನವೆಂಬರ್ (ಹಿ.ಸ):
ಆ್ಯಂಕರ್ :
ನಿಗಮ-ಮಂಡಳಿ ಹುದ್ದೆ ನೇಮಕಾತಿ ಸಂಬಂಧ ಮೊದಲ ಹಂತದ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು(ನವೆಂಬರ್ 28) ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8ಗಂಟೆ ವರೆಗೂ ಸಭೆ ನಡೆಯಲಿದ್ದು, ಇದರಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ. ಅಲ್ಲದೇ ಯಾರಿಗೆ ನಿಗಮ ಮಂಡಳಿ ಭಾಗ್ಯ ದೊರೆಯಲಿದೆ ಎನ್ನುವುದು ಸ್ಪಷ್ಟವಾಗಲಿದೆ. ಹೀಗಾಗಿ ಇಂದಿನ ಸಭೆ ಮಹತ್ವದ ಪಡೆದುಕೊಂಡಿದೆ.
ಹಿಂದೂಸ್ತಾನ್ ಸಮಾಚಾರ್
