• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಸುಳ್ಳೆಂಬ ಮರಳಿನ ಅರಮನೆ ಕಟ್ಟುತ್ತಿರುವ ಮುಖ್ಯಮಂತ್ರಿ : ಪ್ರಹ್ಲಾದ ಜೋಶಿ
Regional

ಸುಳ್ಳೆಂಬ ಮರಳಿನ ಅರಮನೆ ಕಟ್ಟುತ್ತಿರುವ ಮುಖ್ಯಮಂತ್ರಿ : ಪ್ರಹ್ಲಾದ ಜೋಶಿ

CliQ INDIA
Last updated: November 8, 2025 10:55 am
CliQ INDIA
Share
3 Min Read
SHARE

ನವದೆಹಲಿ, 07 ನವೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಹುದ್ದೆ ಹೋಯ್ದಾಟದಲ್ಲಿ ಸಿದ್ದರಾಮಯ್ಯ ಏನೇನೋ ಬಡಬಡಿಸುತ್ತಿದ್ದಾರೆ. ಸರಿಯಾದ ದತ್ತಾಂಶ, ಅಧಿಕಾರಿಗಳಿಂದ ನೈಜ ಮಾಹಿತಿ ಪಡೆದು ಮಾತನಾಡಬೇಕೆಂಬ ಪರಿಜ್ಞಾನ ಸಿಎಂಗೆ ಇಲ್ಲದಿರುವುದು ರಾಜ್ಯದ ದುರಂತ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.

ʼಎಥೆನಾಲ್‌ ಹಂಚಿಕೆಯ ತಮ್ಮ ಮಾಹಿತಿಯೇ ಸುಳ್ಳುʼ ಎಂದಿರುವ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಲ್ಹಾದ ಜೋಶಿ, ʼಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವಲ್ಲಿ ಪರದಾಡುತ್ತಿರುವ ಸಿಎಂ ಹತಾಶೆಯಲ್ಲಿ ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ. ಸತ್ಯಾಂಶ ಅರಿತೋ-ಅರಿಯದೆಯೋ ಬರೀ ಸುಳ್ಳೆಂಬ ಮರಳಿನ ಅರಮನೆ ಕಟ್ಟುತ್ತಿರುವವರು ಅವರೇʼ ಎಂದು ಚಾಟಿ ಬೀಸಿದ್ದಾರೆ.

ʼ2024-25ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆ ಕಂಪನಿ(OMC)ಗಳಿಗೆ ಒಟ್ಟು 139.8 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಸಿದೆ. ಮುಖ್ಯಮಂತ್ರಿ ಆದವರು ಮೊದಲು ದತ್ತಾಂಶ ಅರಿತು, ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದು ಅರ್ಥ ಮಾಡಿಕೊಂಡು ಮಾತನಾಡಬೇಕಿತ್ತು. ಆದರೆ ಸಿಎಂಗೆ ಈ ಕನಿಷ್ಠ ಪರಿಜ್ಞಾನವೂ ಇಲ್ಲದಾಗಿರುವುದು ದುರ್ದೈವʼ ಎಂದು ಟೀಕಿಸಿದ್ದಾರೆ ಜೋಶಿ.

ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾಗ ʼಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿʼ ಎಂದೆಲ್ಲಾ ಸರ್ಕಾರಗಳಿಗೆ ಬಿಟ್ಟಿ ಸಲಹೆ ನೀಡುತ್ತಿದ್ದರು. ಇದೀಗ ತಾವೇ ಅಧಿಕಾರದಲ್ಲಿದ್ದರೂ ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದತ್ತ ಬೆರಳು ತೋರುತ್ತ ಪಲಾಯನವಾದ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರು ಉಲ್ಲೇಖಿಸಿರುವ ಸಂಸತ್ತಿನ ಉತ್ತರದಲ್ಲಿ 30.06.25 ರವರೆಗಿನ ದತ್ತಾಂಶ ಮಾತ್ರ ಇದೆ. ಆದರೆ, ಎಥೆನಾಲ್ ಸರಬರಾಜು ವರ್ಷವು ನವೆಂಬರ್‌ನಿಂದ ಪ್ರಾರಂಭವಾಗಿ ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ. ಇದನ್ನು ಮರೆಮಾಚಿ ತಾವೇ ಸುಳ್ಳಿನ ಕಂತೆ ಕಟ್ಟಿದ್ದಾರೆ ಎಂದು ಸಿಎಂ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

2004-2014ರ ಅವಧಿಯಲ್ಲಿ ಕಬ್ಬು ಬೆಳೆಗಾರರಿಗೆ ಸಕಾಲಕ್ಕೆ ಹಣ ಪಾವತಿ ಆಗುತ್ತಿರಲಿಲ್ಲ. ಇದರಿಂದಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಅತಿ ಕಡಿಮೆ FRP/MSP ಇತ್ತು. 2005ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪ ಮಾಡಿದ್ದರೂ ಆ ಬಗ್ಗೆ ಕಿಂಚಿತ್ತೂ ಯೋಚನೆ ಸಹ ಮಾಡಿರಲಿಲ್ಲ ಇವರು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2013-14ರಿಂದ 2024-25ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು OMCಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತ್ಯುತ್ತರ ಕೊಟ್ಟಿದ್ದಾರೆ.

2013-14ರಲ್ಲಿ ಕಬ್ಬು ಬೆಳೆ ಖರೀದಿ ₹57,104 ಕೋಟಿಗಳಷ್ಟಿತ್ತು, ಆದರೆ 2024-25ರಲ್ಲಿ ₹1,02,687 ಕೋಟಿ ಮೌಲ್ಯ ದಾಟಿದೆ. ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಮೂಲಕ 2013-14ರಲ್ಲಿ ₹210 ಇತ್ತು. ಆದರೆ 2025-26ರ ಸಕ್ಕರೆ ಹಂಗಾಮಿನಲ್ಲಿ ಶೇ.10.25ರಷ್ಟು ಚೇತರಿಕೆಯೊಂದಿಗೆ ₹355/ಕ್ವಿಂಟಲ್‌ಗೆ ಏರಿಕೆಯಾಗಿದೆ. ಇದು ನಮ್ಮ‌ ಸರ್ಕಾರದ ಬದ್ಧತೆ ಸಿದ್ದರಾಮಯ್ಯನವರೇ ಎಂದು ನಿಖರ ಅಂಕಿಅಂಶ ಸಹಿತ ತಿರುಗೇಟು ಕೊಟ್ಟಿದ್ದಾರೆ.

2013-14ರಿಂದ ಕಬ್ಬು ಆಧಾರಿತ ಡಿಸ್ಟಿಲರಿಗಳು ಮತ್ತು ಧಾನ್ಯ ಆಧಾರಿತ ಡಿಸ್ಟಿಲರಿಗಳು ₹2.18 ಲಕ್ಷ ಕೋಟಿಗಿಂತ ಹೆಚ್ಚು ಆದಾಯ ಗಳಿಸಿವೆ. ಇದರಲ್ಲಿ ಕಬ್ಬು ಆಧಾರಿತ ಡಿಸ್ಟಿಲರಿಗಳು (26.10.2025ರಂತೆ) OMCಗಳಿಗೆ ಎಥೆನಾಲ್ ಮಾರಾಟದಿಂದ ₹1.29 ಲಕ್ಷ ಕೋಟಿ ಗಳಿಸಿವೆ. ಇದರಿಂದ ಸಕ್ಕರೆ ಕಾರ್ಖಾನೆಗಳು ರೈತರಿಗೆ ಸಕಾಲಿಕವಾಗಿ ಬಾಕಿ ಪಾವತಿಸಲು ನೆರವಾಗಿದೆ. ಅಲ್ಲದೇ ಕೇಂದ್ರ ಸರ್ಕಾರ ಸಕ್ಕರೆ ರಫ್ತನ್ನು ಸಕಾಲಿಕವಾಗಿ ಅನುಮತಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೆಚ್ಚುವರಿ ಸಕ್ಕರೆಯನ್ನು ಸಮತೋಲನಗೊಳಿಸಲು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. 2013-14ರಿಂದ 2024-25ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು OMCಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇಡೀ ದೇಶಕ್ಕೆ ಅನ್ವಯಿಸುವಂತೆ ‌ಒಂದು ನೀತಿ ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ಅಂತೆಯೇ ಸಕ್ಕರೆ ಬೆಲೆಯಲ್ಲಿ ಸಮತೋಲನ ಕಾಯ್ದುಕೊಳ್ಳುವುದೂ ನಮ್ಮ ಬದ್ಧತೆ. ಅದರಂತೆ ಕ್ರಮ ಕೈಗೊಳ್ಳುತ್ತದೆ. ಕಳೆದ 10 ವರ್ಷದ ಅವಧಿಯಲ್ಲಿ 10 LMT ಸಕ್ಕರೆ ರಫ್ತಿಗೆ ಅವಕಾಶ ನೀಡಲಾಗಿತ್ತು. ಈ ವರ್ಷ 15 LMTಗೆ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್‌ ದುರಾಡಳಿತದ ಪರಮಾವಧಿ-ರೈತರು ಬೀದಿಗೆ:

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕಬ್ಬು ಬೆಳೆಗಾರರ ಬೇಡಿಕೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುವಲ್ಲಿ ವಿಫಲವಾಗಿದೆ. ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆ ಕಟ್ಟಿ ಜನಸಾಮಾನ್ಯರನ್ನು, ರೈತರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ. ʼಗ್ಯಾರಂಟಿಗಳಷ್ಟೇ ನಿಮ್ಮ ಸರ್ಕಾರದ ಆಡಳಿತವಾಗಿದೆಯೇ ಹೊರೆತು ರಾಜ್ಯದ ಸಮಗ್ರ ಅಭಿವೃದ್ಧಿಯಲ್ಲ. ನಿಮ್ಮ ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ಪರಮಾವಧಿಯಿಂದ ರೈತರು ಬೀದಿಗೆ ಬಂದಿದ್ದಾರೆʼ ಎಂದು ಸಚಿವ ಪ್ರಲ್ಹಾದ ಜೋಶಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಸರ್ಕಾರದ ವಿರುದ್ಧ ತಿರುಗಿ ಬಿದ್ದ ಶಾಸಕ ಅಲ್ಲಮಪ್ರಭು
ಸೋಮವಾರದ ರಾಶಿ ಫಲ – Hindusthan Samachar Kannada
ರಾಯಚೂರು ವಿವಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ವಿನೂತನ ರೀತಿಯಲ್ಲಿ ಅಂಬೇಡ್ಕರ್, ಜಗಜೀವನರಾಮ್ ವೃತ್ತ
ಗ್ಯಾರಂಟಿ ಅನುಷ್ಟಾನದಲ್ಲಿ ಗದಗ ಜಿಲ್ಲೆ ಶೇ 99.4 ರಷ್ಟು ಗುರಿ ಸಾಧನೆ : ಬಿ.ಬಿ.ಅಸೂಟಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸಂವೇದನೆ ಉಳ್ಳವರು ನರನಿಂದ ನಾರಾಯಣರಾಗಬಲ್ಲರು:ಡಾ. ಮೋಹನ್‌ ಭಾಗವತ್‌
Next Article ಪಾಕಿಸ್ತಾನ–ಅಫ್ಘಾನಿಸ್ತಾನ ಮಾತುಕತೆ ವಿಫಲ – Hindusthan Samachar Kannada
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?