
ಬೆಂಗಳೂರು, 25 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕರ್ನಾಟಕದಲ್ಲಿ ಸ್ಟಾರ್ಟ್ಅಪ್ಗಳು ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಜನವರಿ ೧ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಹೊಸ ಹೊಸ ಸ್ಟಾರ್ಟ್ಅಪ್ಗಳಿಂದ ವಿನೂತನ ಚಿಂತನೆಯನ್ನು ಹೊರತಂದು ಅದನ್ನು ಪೋಷಿಸುವ ಜೊತೆಗೆ ವಿವಿಧ ಹಂತಗಳಲ್ಲಿ ಹಣಕಾಸಿನ ನೆರವು ನೀಡುವ ಉದ್ದೇಶದಿಂದ Iಜeಚಿ೨Poಅ – ಎಲಿವೇಟೆಡ್ ಯೋಜನೆಯನ್ನು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜಾರಿಗೆ ತಂದಿತ್ತು. ಮಾರುಕಟ್ಟೆ ಅಭಿವೃದ್ಧಿ ಮತ್ತು ಸ್ಕೇಲ್-ಅಪ್ ಅಭಿವೃದ್ಧಿಪಡಿಸಲು ಆರಂಭಿಕ ಹಂತದ ಹಣಕಾಸಿನ ಅವಶ್ಯಕತೆ ಸ್ಟಾರ್ಟ್ಅಪ್ಗಳಿಗೆ ಬೇಕಾಗಲಿದ್ದು, ಇದಕ್ಕಾಗಿ ೫೦ ಲಕ್ಷಗಳವರೆಗೆ ಅನುದಾನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
