ಹಾವೇರಿ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್ ತಿಳಿಸಿದ್ದಾರೆ.
ನಿರಂತರ ಮಳೆ ಶೀತ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಆರೋಗ್ಯ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚಾಗಿದ್ದು ವಿದ್ಯಾರ್ಥಿಗಳು ಮನೆಯಲ್ಲಿ ಬೆಚ್ಚನೆಯ ಉಡುಪು ಧರಿಸಬೇಕು. ಅಲ್ಲದೆ ಬಿಸಿ ನೀರು ಮತ್ತು ಬಿಸಿ ಆಹಾರ ಸೇವಿಸುವಂತೆ ತಿಳಿಸಲಾಗಿದ್ದು, ಅನಾವಶ್ಯಕ ಪ್ರಯಾಣ ಕೈಬಿಡುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
