ಹಾಸನ,15ನವೆಂಬರ್ (ಹಿ.ಸ):
ಆ್ಯಂಕರ್ :
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಕೊನೆಯ ದಿನದ ದರ್ಶನಕ್ಕೂ ಭಕ್ತ ಸಾಗರವೇ ಹರಿದು ಬಂದಿತ್ತು. ಇಂದು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಅಪಾರ ಭಕ್ತರು ಅಮ್ಮನ ದರ್ಶನ ಮಾಡಿ ಆಶೀರ್ವಾದ ಪಡೆದ್ರು. ನವೆಂಬರ್ 2ರಂದು ಹಾಸನಾಂಬೆ ದೇವಿಯ ಗರ್ಭಗುಡಿಯನ್ನು ತೆರೆಯಲಾಗಿದ್ದು ನವೆಂಬರ್ 3ರಿಂದ 13 ದಿನಗಳ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಈ ಸಮಯದಲ್ಲಿ ಗಣ್ಯರು, ರಾಜಕಾರಣಿಗಳು, ಸಿನಿಮಾ ನಟ-ನಟಿಯರು ಸೇರಿದಂತೆ ಲಕ್ಷಾಂತರ ಜನರು ಅಮ್ಮನ ದರ್ಶನ ಪಡೆದುಕೊಂಡಿದ್ದು, ಇದೀಗ ಇಂದು ಹಾಸನಾಂಬೆಯ ದರ್ಶನಕ್ಕೆ ತೆರೆ ಬಿದ್ದಿದೆ. ಅಮ್ಮನ ದರ್ಶನಕ್ಕೆ ಒಂದು ವರ್ಷ ಕಾಯಲೇಬೇಕು. ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಮುಚ್ಚಲು ಕ್ಷಣಗಣನೆ ಆರಂಭವಾಗಿದ್ದು ಮಧ್ಯಾಹ್ನ 12 ನಂತರ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತೆ.
ಹಿಂದೂಸ್ತಾನ್ ಸಮಾಚಾರ್
