
ಬೆಂಗಳೂರು, 2 ಜನವರಿ(ಹಿ.ಸ):
ಆ್ಯಂಕರ್ :
ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಸಮಸ್ಯೆ, ಕುಂದು-ಕೊರತೆಗಳನ್ನು ಆಲಿಸಿ, ನಿವಾರಿಸುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಾಳೆ ಜ.3ರಿಂದ ಮೊದಲ ಹಂತದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ನಡೆಯಲಿದೆ.
ಜನರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಡೆಯಲು ಅವರ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿನ 28 ವಿಧಾನಸಭಾ ವ್ಯಾಪ್ತಿಯಲ್ಲೂ ಹಂತಹಂತವಾಗಿ ಕಾರ್ಯಕ್ರಮ ನಡೆಸಲಾಗುವುದು. ಮೊದಲ ಹಂತದಲ್ಲಿ ಜ. 3ರಂದು ಮಹದೇವಪುರ ವಲಯ, ಜ. 5ರಂದು ಯಲಹಂಕ ಹಾಗೂ ಜ. 6ರಂದು ಪೂರ್ವ ವಲಯ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆಗಳನ್ನು ಖುದ್ದು ಡಿ.ಕೆ. ಶಿವಕುಮಾರ್ ಅವರೇ ಆಲಿಸಿ, ಪರಿಹಾರ ನೀಡಲಿದ್ದಾರೆ. ಜನರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬಂದು ತಮ್ಮ ಸಮಸ್ಯೆಗಳ ಕುರಿತು ದೂರನ್ನು ನೀಡಬಹುದಾಗಿದೆ
ಹಿಂದೂಸ್ತಾನ್ ಸಮಾಚಾರ್
