
ಬೆಂಗಳೂರು, 24 ಜನವರಿ(ಹಿ.ಸ):
ಆ್ಯಂಕರ್ :
ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ಹಣ ವಾಪಾಸು ನೀಡುವಂತೆ ನೋಟಿಸ್ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ತಮ್ಮ ಸಿಎಂ ಆಫ್ ಕರ್ನಾಟಕ ಎಕ್ಸ್ ಅಕೌಂಟ್ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಬರೆದು ಸಿಎಂ ಪೋಸ್ಟ್ ಶೇರ್ ಮಾಡಿದ್ದಾರೆ.
ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ.
-…
ಹಿಂದೂಸ್ತಾನ್ ಸಮಾಚಾರ್
