ಬೆಳಗಾವಿ,16 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮೂಡಲಗಿ ತಾಲೂಕಿನ ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64) , ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸೇವಕರು ಗೋಕಾಕ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನರಾಗಿದ್ದಾರೆ. ಸ್ವಾಮೀಜಿ ನಿಧನದಿಂದ ಅಪಾರ ಭಕ್ತ ಸಮೂಹ ಶೋಕಸಾಗರಲ್ಲಿ ಮುಳುಗಿದೆ. ಇನ್ನು ಬೆಳಗಾವಿಯ ಸುಪ್ರಸಿದ್ಧ ಮಠಗಳಲ್ಲಿ ಅರಭಾವಿಯ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠವೂ ಒಂದು.
ಹಿಂದೂಸ್ತಾನ್ ಸಮಾಚಾರ್
